ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿ ಯೋಜನೆಯಡಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಈ ಪ್ರಶಸ್ತಿಯು ತಲಾ ೧೦ ಸಾವಿರ ನಗದು ಬಹುಮಾನ ಒಳಗೊಂಡಿದ್ದು, ೫ ರಿಂದ ೧೮ ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆ ಸಹಿತ ಸೆಪ್ಟೆಂಬರ್ ೧೫ ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
