Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರ ಜಲ ಶಕ್ತಿ ತಂಡದಿಂದ ವಿವಿಧ ಕಾಮಗಾರಿಗಳ ಪರಿಶೀಲನೆ
(ರಾಜ್ಯ ) ಜಿಲ್ಲೆ

ಕೇಂದ್ರ ಜಲ ಶಕ್ತಿ ತಂಡದಿಂದ ವಿವಿಧ ಕಾಮಗಾರಿಗಳ ಪರಿಶೀಲನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲೆಗೆ ಕೇಂದ್ರ ಜಲ ಶಕ್ತಿ ತಂಡದ ನೂಡಲ್ ಅಧಿಕಾರಿಗಳಾದ ವಿಕಾಸ್ ಡೋಗ್ರಾ ನಿರ್ದೇಶಕರು, ಬೃಹತ್ ಕೈಗಾರಿಕೆ ಸಚಿವಾಲಯ ಮತ್ತು ಕೇಂದ್ರ ಜಲ ಶಕ್ತಿ ನೋಡಲ್ ಅಧಿಕಾರಿಗಳು, ಅನಾಮಿಕ ಐಚ್ ತಾಂತ್ರಿಕ ಅಧಿಕಾರಿಗಳು ಬೆಂಗಳೂರು ಇವರು ವಿಜಯಪುರ ತಾಲೂಕು ಹಾಗೂ ಇಂಡಿ ತಾಲೂಕುಗಳ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ವಿಜಯಪುರ ತಾಲೂಕಿನ ಭೂತನಾಳ ಗ್ರಾಮದ ಅರಣ್ಯ ಇಲಾಖೆಯ ನರ್ಸರಿಗೆ ಭೇಟಿ ನೀಡಿ ಸಸಿಗಳ ಪಾಲನೆ ಪೋಷಣೆಗಳ ಬಗ್ಗೆ ಮಾಹಿತಿ ಪಡೆದ ಅವರು, ಸ್ವತಃ ತಾವೇ ಸಸಿಗಳಿಗೆ ನೀರುಣಿಸಿದರು. ತದನಂತರ ತಿಡಗುಂದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ನಿರ್ಮಿಸಿರುವ ಪ್ರತಿ ಮನೆಗಳಿಗೆ ನಲ್ಲಿಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಕುರಿತು ಪರಿಶೀಲನೆ ನಡೆಸಿದರು.
ಡೋಮನಾಳ ಗ್ರಾಮದ ಗುಡ್ಡದ ಅರಣ್ಯ ವಲಯಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ತೋಟಗಾರಿಕೆ ಇಲಾಖೆಯಡಿ ಅನುಷ್ಠಾನಗೊಂಡಿರುವ ದ್ರಾಕ್ಷಿ ಬೆಳೆ ವೀಕ್ಷಿಸಿದರು. ನಂತರ ಇಂಡಿ ತಾಲೂಕಿನ ಬಸನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಗಸನಾಳ ಗ್ರಾಮದ ಬೋರ್ವೆಲ್ ರಿಚಾರ್ಜ್ ಪಿಟ್ ಕಾಮಗಾರಿ ವೀಕ್ಷಣೆ ಮಾಡಿ,ರಿಚಾರ್ಜ್ ಫಿಟ್ ಕಾಮಗಾರಿಯ ವಿಸ್ತೀರ್ಣ ಆಯವ್ಯಯ ನಿರ್ವಹಣೆ ಬಗ್ಗೆ ತಾಂತ್ರಿಕ ಸಹಾಯಕರೊಂದಿಗೆ ಚರ್ಚಿಸಿದರು.
ಇಂಡಿ ತಾಲೂಕಿನ ಝಳಕಿ ಗ್ರಾಮ ಪಂಚಾಯಿತಿ ಕಟ್ಟಡ ಆವರಣದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಅನುಷ್ಠಾನಗೊಂಡ ಅಬ್ಸರ್ವೇಷನ್ ಬೋರ್ವೆಲ್ ಕಾಮಗಾರಿಯ ನೀರಿನ ಮಟ್ಟ ಹಾಗೂ ಕಾಮಗಾರಿಗೆ ಮೇ ಹಾಗೂ ಜೂನ್ ತಿಂಗಳ ಅಂತರ್ಜಲ ಮಟ್ಟದ ಮಾಹಿತಿ ಪಡೆದುಕೊಂಡರು.
ನಿಂಬಾಳ ಕೆ.ಡಿ ಗ್ರಾಮದ ರಸ್ತೆ ಬದಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೊಂಡ ಅಬ್ಸರ್ವೇಷನ್ ವೀಕ್ಷಿಸಿ ನೀರಿನ ಅಂತರಮಟ್ಟ ವೀಕ್ಷಿಸಿದರು, ತದನಂತರ ಸಾವಳಸಂಗ ಗ್ರಾಮದ ಅರಣ್ಯ ಪ್ರದೇಶದಲ್ಲಿರುವ ಅಮೃತ ಸರೋವರ ಹಾಗೂ ಸಾಮಾಜಿಕ ಅರಣ್ಯ ಇಲಾಖೆಯಡಿ ನಿರ್ಮಿಸಿದ ನೆಡುತೋಪು ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಇಂಡಿ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಾಬು ರಾಠೋಡ, ಚಡಚಣ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂಜಯ ಖಡಗೇಕರ, ಜಿಲ್ಲಾ ಪಂಚಾಯಿತಿಯ ಸಹಾಯಕ ಯೋಜನಾಧಿಕಾರಿ ಗಳಾದ ಅರುಣಕುಮಾರ ದಳವಾಯಿ, ಎ.ಡಿ.ಪಿ.ಸಿ ಪೃಥ್ವಿರಾಜ್ ಪಾಟೀಲ, ವಿಜಯಪುರ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾ.ಉ) ಖಾಸಿಮಸಾಬ ಮಸಳಿ, ಚಡಚಣ ತಾಲೂಕಿನ ಸಹಾಯಕ ನಿರ್ದೇಶಕರು (ಗ್ರಾ.ಉ) ಮಹಾಂತೇಶ ಹೊಗೋಡಿ, ತಿಡಗುಂದಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುಳಾ ಘಂಟಿ, ರುದ್ರವಾಡಿ, ತಾಂತ್ರಿಕ ಸಂಯೋಜಕರು ಸಾಹಿಲ್ ದನಶೆಟ್ಟಿ, ಪರಶುರಾಮ ಶಹಾಪುರ, ಐಇಸಿ ಸಂಯೋಜಕರಾದ ರಾಘವೇಂದ್ರ ಭಜಂತ್ರಿ, ವಿನೋದ್ ಸಜ್ಜನ, ರಾಮಗೌಡ ಸರಬಡಗಿ, ಬಸನಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ್ ಡೊಳ್ಳಿ, ಕೊಳುರಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಿದ್ದು ಲೋಣಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.