Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಕ್ಕ ವಿಷಯಗಳಿಗೆ ರಾಜಕಾರಣ ಮಾಡುತ್ತಿರುವ ಶಾಸಕರು :ಕಿವಡೆ
(ರಾಜ್ಯ ) ಜಿಲ್ಲೆ

ಚಿಕ್ಕ ವಿಷಯಗಳಿಗೆ ರಾಜಕಾರಣ ಮಾಡುತ್ತಿರುವ ಶಾಸಕರು :ಕಿವಡೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಕಾಂಗ್ರೆಸ್ ಸರಕಾರ ಹಣ ಬಿಡುಗಡೆ ಮಾಡಿದ್ದರೆ ದಾಖಲೆ ಬಿಡುಗಡೆ ಮಾಡಲಿ, ಬಿಜೆಪಿ ಅವಧಿಯಲ್ಲಿನ ಎಷ್ಟು ಕಾಮಗಾರಿಗಳನ್ನು ಶಾಸಕ ಯಶವಂತರಾಯಗೌಡ ಪಾಟೀಲ ಉದ್ಘಾಟಿಸಿಲ್ಲವೇ..?ಲೋಕಾರ್ಪಣೆಗೊಳಿಸಿಲ್ಲವೇ..? ಕೇಂದ್ರ ಸರಕಾರದ ಹಲವಾರು ಯೋಜನೆಗಳ‌ ಕಾಮಗಾರಿ ಪೂಜೆ ಸಹ ಶಾಸಕರೆ ಮಾಡಿದ್ದಾರೆ.‌ ಅದಕ್ಕೆ ಸಂಸದರ ತ್ಯಾಗ ಭಾವನೆ ಕಾರಣ. ಆದರೆ ಚಿಕ್ಕ ಪುಟ್ಟ ವಿಷಯಗಳಿಗೆ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್ ಮುಖಂಡರ‌‌‌ ಹಾಗೂ ಶಾಸಕರ ನಡೆ ಜನರಿಗೆ ಅರ್ಥವಾಗುತ್ತಿದೆ ಎಂದು ಬಿಜೆಪಿ ಮಂಡಳ‌ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಕೈ ಮುಖಂಡರ ವಿರುದ್ಧ ಆರೋಪಿಸಿ, ಕಿಡಿಕಾರಿದರು.
ಅವರು ಶುಕ್ರವಾರ ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕೇಂದ್ರ ಸರ್ಕಾರದ ಯೋಜನೆಗಳ ಕಾಮಗಾರಿಗಳ ಭೂಮಿ ಪೂಜೆಯನ್ನು ಸಹ ತಾವೇ ಮಾಡುವ ಶಾಸಕರಿಗೆ ರಾಷ್ಟ್ರೀಯ ಹೆದ್ದಾರಿ ರಸ್ತೆ ಕಾಮಗಾರಿ ಭೂಮಿ ಪೂಜೆಯನ್ನು ಸಂಸದರಿಂದ ಮಾಡಿಸಿ ಜನರಿಗೆ ಬಿಜೆಪಿಯ ಕಾರ್ಯ ಎಂದು ಗೊತ್ತಾಗುವಂತೆ ಮಾಡಿದ್ದು ಹೊಟ್ಟೆಯಲ್ಲಿ ಬೆಂಕಿ ಬಿದ್ದಂತಾಗಿದೆ ಹೀಗಾಗಿ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಜೆಜೆಎಂ ಯೋಜನೆ, ಕೆರೆ ತುಂಬುವ ಯೋಜನೆ ಹೀಗೆ ಹಲವು ಯೋಜನೆಗಳಿಗೆ ಸಂಸದರ ಅನುಪಸ್ಥಿತಿಯಲ್ಲಿ ಪೂಜೆ ನೆರವೇರಿಸಿ ಎಲ್ಲಾ ಕಾಮಗಾರಿಗಳು ತಾವೇ ಮಾಡಿಸಿದ್ದು ಎಂಬಂತೆ ಜನತೆಗೆ ತೋರಿಸಿಕೊಡುವ ಕಾರ್ಯವನ್ನು ಶಾಸಕ ಯಶವಂತರಾಯ ಗೌಡರು ಮಾಡುತ್ತ ಬಂದಿದ್ದಾರೆ. ಸಂಸದ ಜಿಗಜಿಣಗಿ ಅವರ ವಯಸ್ಸಿಗಾದರೂ ಗೌರವ ಕೊಡಬೇಕಿದ್ದ ಶಾಸಕರು ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ತರವಲ್ಲ ಎಂದರು.
ಈಗ ಬಿಜೆಪಿ ಅವರು ತಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಜನತೆಗೆ ಗೊತ್ತಾಗಲಿ ಎಂದು ಕಾರ್ಯಕ್ರಮ ಮಾಡಿದ್ದು, ಶಾಸಕರಿಗೆ ಸಹಿಸಂದಂತಾಗಿದೆ. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಸಂಸದ ರಮೇಶ್ ಜಿಗಜಿಣಗಿ ಅವರು ಸ್ವತ: ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಅವರು ಭರವಸೆ ನೀಡಿದ ನಂತರ ರೈತರಿಗೆ ಪ್ರತಿಭಟನೆ ಕೈ ಬಿಡಲು ಮನವಿ ಮಾಡಿಸಿದ್ದು ಶಾಸಕರಿಗೂ ತಿಳಿದಿದೆ. ಸದನದಲ್ಲಿ ಸಹ ಶಾಸಕರು ಈ ನೀರಾವರಿ ಯೋಜನೆ ನಮ್ಮ ಪ್ರದೇಶಕ್ಕೆ ಬರುತ್ತದೆ ಮಂಜೂರು ಮಾಡಿದ ಕಾರಜೋಳ ಸಾಹೇಬರು ಹಾಗೂ ಮುಖ್ಯಮಂತ್ರಿಗಳಿಗೆ ಅಭಿನಂದಿಸುವುದಾಗಿ ತಿಳಿಸಿದ್ದಾರೆ. ಈಗ ಅದೇ ಯೋಜನೆ ತಾವೇ ಸ್ವತಃ ಮಂಡಿಸಿರುವಂತೆ ಮಾತನಾಡುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಬಿಜೆಪಿ ಮುಖಂಡ ಅನೀಲ ಜಮಾದಾರ ಮಾತನಾಡಿ, ಸಂಸದ ರಮೇಶ ಜಿಗಿಜಿಣಗಿ ಅವರು ಸಾಕಷ್ಟು ಅಭಿವೃದ್ಧಿ ಯೋಜನೆಗಳನ್ನು ಇಂಡಿ ಮತಕ್ಷೇತ್ರಕ್ಕೆ ನೀಡಿದ್ದಾರೆ. ಆದರೆ ಅವರು ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಲು ಆಗಮಿಸಿಲ್ಲ, ಸ್ಥಳೀಯ ಶಾಸಕರೇ ಪೂಜೆ ಮಾಡಿಕೊಂಡು ಹೋಗಲಿ ಎಂಬ ತ್ಯಾಗಭಾವನೆಯನ್ನು ಹೊಂದಿದ್ದರು, ಆದರೆ ಸ್ಥಳೀಯ ಶಾಸಕರು ಅದನ್ನು ಬಳಸಿಕೊಂಡು ಕೇಂದ್ರ ಸರ್ಕಾರದ ಯೋಜನೆಗಳನ್ನು ಸಹ ತಾವೇ ಪೂಜೆ ಮಾಡಿ ತಾವೇ ಮಾಡಿಸಿದಂತೆ ಜನತೆಯ ಮುಂದೆ ಹೇಳಿಕೊಳ್ಳುತ್ತಿರುವುದು ಜನತೆಗೆ ಯಾವ ಯೋಜನೆ ಯಾರಿಗೆ ಬರುತ್ತದೆ ಎಂಬ ಬಗ್ಗೆ ಗೊತ್ತಾಗುತ್ತದೆ ಜನರೇನು ನೀವು ಹೇಳುವುದನ್ನು ಪೂರ್ಣವಾಗಿ ನಂಬಲು ಹುಚ್ಚರಲ್ಲ ಎಂದರು.
ಈ ಸಂದರ್ಭದಲ್ಲಿ ದೇವೆಂದ್ರ ಕುಂಬಾರ, ಹಣಮಂತ್ರಾಯಗೌಡ ಪಾಟೀಲ, ಶಾಂತು ಕಂಬಾರ, ವಜ್ರಕಾಂತ ಕೂಡಿಗನೂರ, ರಾಜಶೇಖರ ಯರಗಲ್ ಮತ್ತಿತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.