ಉದಯರಶ್ಮಿ ದಿನಪತ್ರಿಕೆ
ಬಬಲೇಶ್ವರ: ತಾಲ್ಲೂಕಿನ ಜೈನಾಪುರ ಸರ್ಕಾರಿ ಪ್ರೌಢ ಶಾಲೆಯ ವಿಧ್ಯಾರ್ಥಿಗಳಿಗೆ ಬೆಳ್ಳುಬ್ಬಿಯ ಮಳೆ ಮಲ್ಲೇಶ್ವರ ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆಯ ವತಿಯಿಂದ ಎಲ್ಲ ವಿಧ್ಯಾರ್ಥಿಗಳಿಗೆ ಶನಿವಾರ ಕಲಿಕಾ ಸಾಮಗ್ರಿಗಳ ವಿತರಣೆ ಮಾಡಿ ಬಡ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಿದರು.
ಸಂಸ್ಥೆಯ ಉಪಾಧ್ಯಕ್ಷ ಸಿದರಾಯ ಹೊಸಮನಿ ಮಾತನಾಡಿ ಮಕ್ಕಳ ಅಭಿವೃದ್ಧಿಗಾಗಿ ನಮ್ಮ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಮಮದಾಪೂರ ವಲಯ ಮಟ್ಟದಲ್ಲಿ ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು, ಬಡ ಮಕ್ಕಳ ಕಲಿಕೆಗೆ ಅಗತ್ಯ ಕಲಿಕಾ ಸಾಮಗ್ರಿ ವಿತರಿಸುತ್ತಾ ಮಕ್ಕಳ ಕಲಿಕೆಗೆ ಅನೂಕೂಲ ಮಾಡಿಕೊಡುತ್ತಿದ್ದೇವೆ ಎಂದರು.
ಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಅವಟಿ ಮಾತನಾಡಿ ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳಿಗೆ ಈ ಸೇವಾ ಸಂಸ್ಥೆ ಎಲ್ಲ ಸಹಕಾರ ನೀಡಿ ಮಕ್ಕಳ ಕಲಿಕೆಗೆ ಉತ್ತೇಜನ ನೀಡುತ್ತಿದೆ. ಈ ಸಂಸ್ಥೆ ಇನ್ನೂ ಹೆಚ್ಚು ಅಭಿವೃದ್ಧಿ ಹೊಂದಲಿ ಎಂದು ಸೇವಾ ಸಂಸ್ಥೆಯ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಶಿವಾನಂದ ಚನಗೊಂಡ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಸದಾನಂದ ಮಂಟೂರ, ಶಾಲಾ ಶಿಕ್ಷಕರು, ಸಂಸ್ಥೆಯ ಗೌರವ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಮತ್ತು ಎಲ್ಲ ಸರ್ವ ಸದಸ್ಯರು ಉಪಸ್ಥಿತರಿದ್ದರು.

