ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಮ್ಮ ದೇಶದ ಪ್ರಜಾಪ್ರಭುತ್ವ ಬೃಹತ್ತಾಗಿದ್ದು ಅದರ ಆಶಯದಂತೆ ನಾವು ಬದುಕಬೇಕಾಗಿದೆ. ಸಂವಿಧಾನದ ಆಶಯಗಳಾದ ಸಮಾನತೆ, ಸ್ವಾತಂತ್ರ್ಯ ಹಾಗೂ ಭಾತೃತ್ವದ ಆದರ್ಶಗಳನ್ನು ಜನರಲ್ಲಿ ಗಟ್ಟಿಗೊಳಿಸುವಲ್ಲಿ ಈ ಕಾರ್ಯಕ್ರಮ ನಿಜಕ್ಕೂ ಶ್ಲಾಘನೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಹೇಳಿದರು.
ನಗರದ ಬಿ.ಎಲ್.ಡಿ.ಈ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮಹಾವಿದ್ಯಾಲಯದ ಆವರಣದಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಜರುಗಿತು. ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಆರ್.ಎಂ.ಮಿರ್ದೆ ಸಂವಿಧಾನದ ಪ್ರಸ್ತಾವನೆ ಓದಿದರು. ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ನಿಂತು ನಂತರ ತಮ್ಮ ಎರಡು ಕೈಗಳನ್ನು ಮೇಲಕೆತ್ತಿ ಜೈ ಹಿಂದ, ಜೈ ಕರ್ನಾಟಕ ಎಂದು ಘೋಷಣೆ ಕೂಗಿ ಸರಪಳಿ ಕಳಚಲಾಯಿತು.
ಈ ವೇಳೆಯಲ್ಲಿ ಶಿಕ್ಷಣ ಶಾಸ್ತ್ರ ವಿಭಾಗ ಉಪನ್ಯಾಸಕ ಪ್ರೊ.ಸಿ.ಎನ್.ಕುನ್ನೂರ ಮಾತನಾಡಿ, ನಮ್ಮ ಭಾರತ ದೇಶ ಬೃಹತ್ತಾದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವಂಥದ್ದು ಅದರ ಆಶಯದಂತೆ ಇಂದು ನಾವು ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಜಾತ್ಯಾತೀತದಿಂದ ಬದುಕವಂತಾಗಬೇಕು. ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ಸಂವಿಧಾನವನ್ನು ಜನವರಿ ೨೬ ೧೯೫೦ ರಲ್ಲಿ ಜಾರಿಗೊಳಿಸುವ ಮೂಲಕ ಭಾರತ ಸ್ವಾತಂತ್ರ್ಯ ಗಣರಾಜ್ಯವಾಯಿತು. ದೇಶದ ಪ್ರಗತಿಗೆ ಮತ್ತು ಅಭಿವೃದ್ದಿಗೆ ಶ್ರಮಿಸಬೇಕಾಗಿದೆ. ಕೇವಲ ಆಚರಣೆಗೆ ಸೀಮಿತವಾಗದೆ ನಾವು ಪ್ರಜಾಪ್ರಭುತ್ವ ಮೌಲ್ಯಗಳು ಅಳವಡಿಸಿಕೊಂಡು ಬದುಕಬೇಕಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯ ಡಾ.ಅನೀಲ.ನಾಯಕ, ಐಕ್ಯೂಎಸಿ ನಿರ್ದೇಶಕ ಡಾ.ಪಿ.ಎಸ್.ಪಾಟೀಲ, ನ್ಯಾಕ್ ಸಂಯೋಜಕ ಡಾ.ಕೆ.ಮಹೇಶಕುಮಾರ, ಎನ್‌ಸಿಸಿ ಅಧಿಕಾರಿ ಡಾ.ರಾಮಚಂದ್ರ ನಾಯಕ, ದೈಹಿಕ ನಿರ್ದೇಶಕ ಎಸ್.ಕೆ.ಪಾಟೀಲ, ಸಾಂಸ್ಕೃತಿಕ ವಿಭಾಗದ ಕಾರ್ಯಾದ್ಯಕ್ಷ ಡಾ.ಶ್ರೀನಿವಾಸ ದೊಡ್ಡಮನಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ಎನ್ ಸಿಸಿ, ಎನ್‌ಎಸ್ ಎಸ್ ಸ್ವಯಂ ಸೇವಕ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

