ಸಿಂದಗಿ: ಈ ಚುನಾವಣೆಯಲ್ಲಿ ನಾನು ಗೆದ್ದರೆ ಇದು ನನ್ನ ಗೆಲುವಲ್ಲ, ಇದು ಕಾರ್ಯಕರ್ತರ ಗೆಲುವಾಗುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.
ಬುಧವಾರದಂದು ತಾಲೂಕು ಆಡಳಿತ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಬಸವೇಶ್ವರ ವೃತ್ತದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಶಾಸಕ ರಮೇಶ ಭೂಸನೂರ, ಉಪಚುನಾವಣೆಯಲ್ಲಿ ಕೊಟ್ಟ ಭರವಸೆಯಂತೆ ತಳವಾರ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ಮತ್ತು ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆಯ ಕಾಲುವೆಗೆ ನೀರನ್ನು ಹರಿಸುಲು ೬ಹೊಸ ಮೋಟಾರ್‌ಗಳನ್ನು ಕುಡಿಸುವ ಕಾಲುವೆಗಳಿಗೆ ನೀರು ಹರಿಸುವ ಮೂಲಕ ರೈತರ ಭರವಸೆಯನ್ನು ಉಳಿಸಿಕೊಂಡಿದ್ದೇನೆ. ಈ ಭಾಗದ ಹಾಲುಮತ ಸಮುದಾಯಕ್ಕೆ ಸಮುದಾಯ ಭವನಗಳನ್ನು ಮಂಜೂರು ಮಾಡಿದ್ದೇನೆ ಎಂದು ಹೇಳಿದರು.
ಈ ವೇಳೆ ಮಾತನಾಡಿದ ವಿ.ಪ ಸದಸ್ಯ ಹಣಮಂತ ನಿರಾಣಿ, ಮಾಜಿ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಸಿಂದಗಿ ಕ್ಷೇತ್ರದಲ್ಲಿ ಅನುಕಂಪದ ಅಲೆ ನಡೆಯುವುದಿಲ್ಲ. ಮೂರು ಬಾರಿ ಶಾಸಕರಾದ ಅನುಭವ ರಮೇಶ ಭೂಸನೂರ ಅವರಿಗಿದೆ. ಕಾರಣ ಹೊಸಬರಿಗೆ ಆದ್ಯತೆ ಕೊಟ್ಟರೆ ಮತ್ತೊಮ್ಮೆ ಚುನಾವಣೆ ಬರುವವರೆಗೆ ಶಾಸಕ ಸ್ಥಾನದ ತರಬೇತಿಯನ್ನೇ ನೀಡಬೇಕಾಗುತ್ತದೆ. ಕಾರಣ ಅನುಭವಿ ರಾಜಕಾರಣಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕ್ಷೇತ್ರದ ಅಭಿವೃದ್ದಿಗೆ ಅವಕಾಶ ಮಾಡಿಕೊಡಿ ಎಂದು ಹೇಳಿದರು.
ಈ ವೇಳೆ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ, ಮಾಜಿ ಲಿಂಬೆ ನಿಗಮ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಮಲ್ಲಿಕಾರ್ಜುನ ಜೋಗುರ, ಶ್ರೀಶೈಲಗೌಡ ಬಿರಾದಾರ, ಸಂತೋಷ ಪಾಟೀಲ ಡಂಬಳ, ಶಿಲ್ಪಾ ಕುದರಗೊಂಡ, ಶಿವಕುಮಾರ ಬಿರಾದಾರ, ಗುರು ತಳವಾರ ಸೇರಿದಂತೆ ಕಾರ್ಯಕರ್ತರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment