Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಜಾನನ ಮೆರವಣಿಗೆಯ ಸೊಬಗು ಹೆಚ್ಚಿಸಿದ ಕಲಾ ತಂಡಗಳು
(ರಾಜ್ಯ ) ಜಿಲ್ಲೆ

ಗಜಾನನ ಮೆರವಣಿಗೆಯ ಸೊಬಗು ಹೆಚ್ಚಿಸಿದ ಕಲಾ ತಂಡಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರದ ಶ್ರೀ ಶಿವಾಜಿ ಮಹಾರಾಜ ವೃತ್ತದಲ್ಲಿ ಪ್ರತಿಷ್ಠಾಪಿಸಲಾಗಿರುವ ಶ್ರೀ ಗಜಾನನ ಮಹಾಮಂಡಳದ ಗಣೇಶ ಉತ್ಸವ ಮೂರ್ತಿಯ ವಿಸರ್ಜನಾ ಪೂರ್ವ ಮೆರವಣಿಗೆಯು ರವಿವಾರ ವೈಭವದಿಂದ ನಡೆಯಿತು.
ಈ ಬಾರಿ ಸರಳ ರೀತಿಯ ಮೆರವಣಿಗೆ ನಡೆಸಲಾಗಿತ್ತಾದರೂ ಅನೇಕ ರೀತಿಯ ಕಲಾ ತಂಡಗಳು ಮೆರವಣಿಗೆಯ ಸೊಬಗು ಹೆಚ್ಚಿಸಿದ್ದವು. ಗಜಾನನ ಮಹಾಮಂಡಳ ವತಿಯಿಂದ ಬೃಹತ್ ಫೈಬರ್ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ಸಾಂಕೇತಿಕವಾಗಿ ಮಣ್ಣಿನ ಗಣೇಶನ ಉತ್ಸವ ಮೂರ್ತಿಯನ್ನು ಶ್ರದ್ಧಾ-ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.
ವಿಜಯಪುರದ ಶ್ರೀ ಶಿವಾಜಿ ವೃತ್ತದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಿದ ಮಹಾಮಂಟಪದಲ್ಲಿ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ವಿಸರ್ಜನಾ ಮೆರವಣಿಗೆ ಆರಂಭಗೊಂಡಿತು.
ವಿವಿಧ ಪುಷ್ಪಗಳಿಂದ ಸಾಲಂಕೃತ ರಥದಲ್ಲಿ ಗಣೇಶನ ಉತ್ಸವ ಮೂರ್ತಿಯನ್ನು ಇರಿಸಲಾಗಿತ್ತು. ಕಹಳೆ, ಕರಡಿ ಮಜಲು, ನವಿಲು ಕುಣಿತ, ಡೊಳ್ಳು ಹೀಗೆ ನಾನಾ ವೈದ್ಯ ವೈಭವಗಳ ಸದ್ದು ಮುಗಿಲು ಮುಟ್ಟಿತ್ತು. ಯುವಕರು ಭಕ್ತಿಯ ಹರ್ಷೋದ್ಘಾರದ ಮೂಲಕ ಮೆರವಣಿಗೆಯಲ್ಲಿ ಭಾಗವಹಿಸಿದರು.
ಶ್ರೀ ಶಿವಾಜಿ ಮಹಾರಾಜರ ವೃತ್ತದಿಂದ ಆರಂಭಗೊಂಡ ಮೆರವಣಿಗೆಯು ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ತಾಜ್ ಬಾವಡಿ ತಲುಪಿತು. ಅಲ್ಲಿ ನಿರ್ಮಿಸಲಾದ ತಾತ್ಕಾಲಿಕ ಹೊಂಡದಲ್ಲಿ ಪ್ರತಿಷ್ಠಾಪನೆ ಮಾಡಲಾದ ಮಣ್ಣೀನ ಗಣೇಶ ಮೂರ್ತಿಯನ್ನು ಭಕ್ತಿಪೂರ್ವಕವಾಗಿ ವಿಸರ್ಜಿಸಲಾಯಿತು.
ವಿಸರ್ಜನಾ ಪೂರ್ವ ಮೆರವಣಿಗೆಗೆ ಚಾಲನೆ ನೀಡಿದ ಸಂಸದ ರಮೇಶ ಜಿಗಜಿಣಗಿ, ವಿಘ್ನ ನಿವಾರಕ ಗಣೇಶ ಅನೇಕ ಸಮಸ್ಯೆಗಳನ್ನು ನಿವಾರಿಸುತ್ತಾನೆ, ಗಣಪತಿಯನ್ನು ಭಕ್ತಿಭಾವದಿಂದ ಪ್ರಾರ್ಥಿಸಿದರೆ ಸಕಲ ವಿಘ್ನಗಳು ದೂರವಾಗಿ ಇಷ್ಟಾರ್ಥಗಳು ನೆರವೇರುತ್ತವೆ, ಭಕ್ತಿ ಎನ್ನುವುದು ನಮ್ಮ ಉಸಿರಾಗಬೇಕು ಎಂದರು.
ಪ್ರತಿ ವರ್ಷ ಗಜಾನನ ಮಹಾಮಂಡಳ ಗಣೇಶೋತ್ಸವಕ್ಕೆ ವಿಶೇಷ ಮೆರಗು, ಗಜಾನನ ಮಂಡಳಿಗಳಿಗೆ ಪಾರಿತೋಷಕ ಮೊದಲಾದ ರೀತಿಯ ಪ್ರೋತ್ಸಾಹ ನೀಡುತ್ತಾ ಬಂದಿದೆ, ಈ ರೀತಿಯ ಕಾರ್ಯಕ್ರಮಗಳು ಸದಾ ಮುಂದುವರೆಯಲಿ ಎಂದು ಹಾರೈಸಿದರು.

ವಿಜಯಪುರ ರತ್ನ ಪ್ರಶಸ್ತಿ ಪ್ರದಾನ

ಸಮಾಜಕ್ಕೆ ಸೇವೆ ಸಲ್ಲಿಸಿದ ಸಾಧಕರಿಗೆ ವಿಜಯಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಕನಕವ್ವಾ ತಿಕೋಟಿ, ಸೀತಾ ಸಂಗಾಪೂರ, ಮುತ್ತಪ್ಪ ಭೋವಿ, ಅನೇಕ ವರ್ಷಳಿಂದ ತಮ್ಮದೇ ಆದ ರೀತಿಯಲ್ಲ ಸಮಾಜ ಸೇವೆ ಮಾಡುತ್ತಿರುವ ಶಂಕರ ಕಟಗೆ, ಸಾವಯವ ಕೃಷಿ ಕ್ಷೇತ್ರದಲ್ಲಿ ಸಂಗಪ್ಪ ವಿಜಾಪೂರ, ನೀಟ್ ಪರೀಕ್ಷೆಯಲ್ಲಿ ಸಾಧನೆ ತೋರಿದ ರಾಜೇಶ್ವರಿ ಮಠ, ಕಲಾವಿದ ಚೆನ್ನಪ್ಪ ಪೂಜಾರಿ ಅವರಿಗೆ ವಿಜಯಪುರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬುರಾಣಪೂರ ಆರೂಢಾಶ್ರಮದ ಮಾತೋಶ್ರೀ ಯೋಗೇಶ್ವರಿ ಮಾತಾಜಿ ಸಾನಿಧ್ಯ ವಹಿಸಿದ್ದರು. ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ರಮೇಶ ಭೂಸನೂರ, ಗಜಾನನ ಮಹಾಮಂಡಳದ ಅಧ್ಯಕ್ಷ ಆನಂದ ಮುಚ್ಚಂಡಿ‌ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026

ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ

ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ

ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 19, 2026
    In ದಿನಪತ್ರಿಕೆ
  • ಸರ್ಕಾರಿ ಯೋಜನೆಗಳಿಂದ ಬದುಕು ರೂಪಿಸಿಕೊಳ್ಳಿ :ಇಂಡಿ
    In (ರಾಜ್ಯ ) ಜಿಲ್ಲೆ
  • ನಮ್ಮ ಪರಂಪರೆ ಸಂರಕ್ಷಿಸುವ ಜವಾಬ್ದಾರಿ ನಮ್ಮದು :ಡಾ.ಮಯೂರ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಲೋಕಾಯುಕ್ತ ಬಲೆಗೆ ಸರ್ಕಾರಿ ಸಿಬ್ಬಂದಿ!
    In (ರಾಜ್ಯ ) ಜಿಲ್ಲೆ
  • ನಮ್ಮ ನಿಸ್ವಾರ್ಥ ಸತ್ಕಾರ್ಯಗಳು ನಮ್ಮನ್ನು ಕಾಪಾಡುತ್ತವೆ :ಡಾ.ಗೀತಾ
    In (ರಾಜ್ಯ ) ಜಿಲ್ಲೆ
  • ಏ.೨೪ಕ್ಕೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಪ್ರತಿಷ್ಠಿತ ಶಾಲೆ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಏ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಏ.೨೨ರಿಂದ ಸಿಇಟಿ ಪ್ರರೀಕ್ಷೆ: ಸುಸೂತ್ರ ನಡೆಸಲು ಎಡಿಸಿ ಸೂಚನೆ
    In (ರಾಜ್ಯ ) ಜಿಲ್ಲೆ
  • ಹ್ಯಾಂಡ್ ಪೋಸ್ಟ್ ಟು ಕೋಟೆ ಜೋಡಿ ರಸ್ತೆ- ಹೈಟೆಕ್ ಪಾರ‍್ಕ್ ನಿರ‍್ಮಾಣ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.