ಉದಯರಶ್ಮಿ ದಿನಪತ್ರಿಕೆ
ಚಡಚಣ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಉತ್ತಮ ವೇದಿಕೆಯಾಗಿದ್ದು, ಮಕ್ಕಳಲ್ಲಿನ ಸೃಜನಶೀಲತೆಯೂ ವೃದ್ಧಿಸುವ ಜತೆಗೆ ವೇದಿಕೆ ಮೇಲಿನ ಭಯ ದೂರ ಮಾಡಲು ಸಹಕಾರಿಯಾಗಿದೆ ಎಂದು ಶಿಕ್ಷಕರ ಸೋಸಾಯಿಟಿ ಅಧ್ಯಕ್ಷ ಎಸ್.ಎಸ್ ಪಾಟೀಲ್ ಅವರು ಹೇಳಿದರು.
ಪಟ್ಟಣದ ಶ್ರೀ ಕಲ್ಮೇಶ್ವರ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಲಾ ಶಿಕ್ಷ ಣ ಹಾಗೂ ಸಾಕ್ಷರತಾ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕ್ಷೇತ್ರಸಮನ್ವಯ ಅಧಿಕಾರಿಗಳ ಕಾರ್ಯಾಲಯ ಚಡಚಣ ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಚಡಚಣ ಇವರ ಸಹಯೋಗದಲ್ಲಿ ಆಯೋಜಿಸಿದ್ದ, ಚಡಚಣ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಕ್ಕಳ ‘ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಪ್ರತಿಭಾ ಕಾರಂಜಿ, ಮಕ್ಕಳ ಸಂತೆ ಮೇಳ, ಕ್ರೀಡಾಕೂಟ ಸೇರಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಜಾನಪದ ಪ್ರಕಾರದ ಪ್ರತಿಭೆಯನ್ನು ವ್ಯಕ್ತಪಡಿಸಬೇಕು ಎಂದರು.
ಶಿಕ್ಷಣ ಸಂಯೋಜಕ ಬಿ.ಕೆ. ವಾಘಮೋರೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದ ಸಾನಿಧ್ಯವನ್ನು ಹಾವಿನಾಳ ಚರಂತಿಮಠದ ವೇದಮೂರ್ತಿ ವಿಜಯಮಹಾಂತೇಶ್ವರ ಶಿವಾಚಾರ್ಯರು ಹಾಗೂ ಅಧ್ಯಕ್ಷತೆ ಕಲ್ಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಕೆ.ಎಸ್.ವಾಲಿಕಾರ ಅವರು ವಹಿಸಿದ್ದರು.
ಮುಖ್ಯ ಅತಿಥಿಗಳಾದ ಪ.ಪಂ ಸದಸ್ಯ ಇಬ್ರಾಹಿಂ ಸೌದಾಗರ, ಶಿಕ್ಷಣ ಸಂಯೋಜಕ ಸಂಗಮೇಶ ಸೂರಜ, ನೋಡಲ್ ಅಧಿಕಾರ ಎನ್.ಜೆ ಸಿನಖೇಡ, ಬಿ.ಆರ್.ಪಿ ಶ್ರೀಮತಿ ಆರ್.ಕೆ ಕಾಮಗೊಂಡ, ಮುಖ್ಯಶಿಕ್ಷಕ ಎಮ್.ಕೆ ಉಮರಾಣಿ, ಸುನೀಲ್ ಯಳಮೇಲಿ, ಅನುದಾನಿತ ಮಾಧ್ಯಮಿಕ ಶಾಲಾ ಶಿಕ್ಷಕರ ಸೊಸೈಟಿ ಅಧ್ಯಕ್ಷ ಆರ್.ಎಮ್ ಬಂಡಿ ಸೇರಿದಂತೆ ಚಡಚಣ ಕ್ಲಸ್ಟರನ ಪ್ರಾಥಮಿಕ-ಪ್ರೌಢ ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬಳಿಕ ವಿವಿಧ ಕಲೆ ಪ್ರದರ್ಶಿಸಿ ವಿಜೇತರಾದ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಜತೆಗೆ ಪಾರಿತೋಷಕ ನೀಡಿ ಗೌರವಿಸಲಾಯಿತು.

