ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಪಟ್ಟಣದ ಹುಡ್ಕೋ ಬಡಾವಣೆಯ ಪಂಜುರ್ಲಿ ಹೋಟಲ್ ನಲ್ಲಿ ಸೆ.೧೮ ರಂದು ಬೆಳಿಗ್ಗೆ ೧೦ಗಂಟೆಗೆ ವಿಶ್ವ ಪೌಷ್ಟಿಕ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರೂ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಕಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮತಿಯ ಸದಸ್ಯ ಕಾರ್ಯದರ್ಶಿಗಳಾದ ಸಂಪತ್ತಕುಮಾರ ಬಳೂಳಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಹಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಅಪರ ಸರ್ಕಾರ ವಕೀಲ ಎಚ್.ಎಲ್.ಸರೂರ, ಕಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ತಹಶೀಲ್ದಾರ ಬಲರಾಮ ಕಟ್ಟಿಮನಿ, ತಾಲೂಕು ಪಂಚಾಯತ ಇಓ ನಿಂಗಪ್ಪ ಮಸಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಕೆ.ಕೆ.ಚೌವ್ಹಾಣ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ತಾಲೂಕು ಆರೋಗ್ಯಾಧಿಕಾರಿ ಸತೀಶ ತಿವಾರಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಸಿಡಿಪಿಓ ಕಚೇರಿಯ ಮೇಲ್ವಿಚಾರಕಿ ಕಲಾವತಿ ಬೆಳ್ಳುಂಡಗಿ ಪೌಷ್ಟಿಕಾಂಶ ಅಹಾರದ ಕುರಿತು ವಿಶೇಷ ಉಪನ್ಯಾಸ ನೀಡಲಿರುವುದಾಗಿ ಪ್ರಕಟಣೆ ತಿಳಿಸಿದೆ.
