Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸೆ.೨೨ರಂದು ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ಮಹಾಪರಿಷತ್ ಸಭೆ
(ರಾಜ್ಯ ) ಜಿಲ್ಲೆ

ಸೆ.೨೨ರಂದು ಬೆಳಗಾವಿಯಲ್ಲಿ ಪಂಚಮಸಾಲಿ ವಕೀಲರ ಮಹಾಪರಿಷತ್ ಸಭೆ

By No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸುದ್ದಿಗೋಷ್ಠಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ಕೊಡುವಲ್ಲಿ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಕಾನೂನಾತ್ಮಕವಾಗಿ ಹೋರಾಡಲು ಸಮಾಜ ಮುಂದಾಗಿದೆ. ಈ ಹಿನ್ನೆಲೆ ಸೆಪ್ಟೆಂಬರ್ ೨೨ರಂದು ಬೆಳಗ್ಗೆ ೧೦ಗಂಟೆಗೆ ಬೆಳಗಾವಿಯ ಗಾಂಧಿ ಭವನದಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ಮಹಾಪರಿಷತ್ ಸಭೆ ನಡೆಸಲಾಗುತ್ತಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದ ಕಿತ್ತೂರು ರಾಣಿ ಚೆನ್ನಮ್ಮ ಸಮುದಾಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿಗಾಗಿ ಆಗ್ರಹಿಸಿ ಕಳೆದ ಮೂರೂವರೆ ವರ್ಷಗಳಿಂದ ನಡೆಸುತ್ತಿರುವ ಹೋರಾಟ ಇದೀಗ ಮತ್ತೊಂದು ಆಯಾಮದ ಮೂಲಕ ಸಾಗಲಿದೆ. ರಾಜ್ಯದಲ್ಲಿರುವ ಸಮಾಜದ ಎಲ್ಲ ವಕೀಲರನ್ನು ಸೇರಿಸಿ ಹೋರಾಟ ಮಾಡಲಾಗುತ್ತಿದೆ. ಎಲ್ಲಾ ವಕೀಲರು ನಮ್ಮ ಹಕ್ಕು ಕೇಳುವುದರಲ್ಲಿ ತಪ್ಪೇನಿದೆ ಎಂದು ೨೨ರಂದು ಬೆಳಗ್ಗೆ ೧೦ಗಂಟೆಗೆ ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸಭೆ ಸೇರಲಿದ್ದಾರೆ. ಸಭೆಯಲ್ಲಿ ಮುಂದೆ ಏನು ಮಾಡಬೇಕು ಎಂಬುದು ಚರ್ಚಿಸಲಾಗುವುದು ಎಂದರು.
ಈ ಬಾರಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಅಡ್ವೊಕೇಟ್ ಪರಿಷತ್ತಿನ ಮೂಲಕ ಕಾನೂನು ಹೋರಾಟ ನಡೆಸಲಾಗುವುದು. ಸರ್ಕಾರದಿಂದ ಇದಕ್ಕೂ ಸ್ಪಂದನೆ ಸಿಗದಿದ್ದರೆ ಮುಂಬರುವ ಡಿಸೆಂಬರ್ ಅಧಿವೇಷನಲ್ಲಿ ಉಗ್ರ ಹೋರಾಟ ಮಾಡುವ ಎಚ್ಚರಿಕೆ ನೀಡಿದರು. ಸೆ.೨೨ರಂದು ಬೆಳಗಾವಿಯ ರಾಣಿ ಚೆನ್ನಮ್ಮನ ವೃತ್ತಕ್ಕೆ ಬಂದು ಧರಣಿ ಮಾಡಲಾಗುವುದು. ಹಾಗಾಗಿ ರಾಜ್ಯದಲ್ಲಿನ ಸಮಾಜದ ಎಲ್ಲ ವಕೀಲರು ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಇನ್ನು ಸಮಾಜದ ಬಡ ವಿದ್ಯಾರ್ಥಿಗಳ ಹಾಗೂ ಉದ್ಯೋಗಕ್ಕಾಗಿ ಮನೆಮಠ ಬಿಟ್ಟು ಮುಖಂಡರು ಹಾಗೂ ಎಲ್ಲರೂ ಹೋರಾಟ ಮಾಡುತ್ತಿದ್ದಾರೆ. ಈ ಹಿಂದೆ ನಾವು ಮಾಡಿದ ಹೋರಾಟದಿಂದ ಹಿಂದಿನ ಸರ್ಕಾರ ೨ಡಿ ಮಾಡಿದ್ದರೂ ಅದು ಜಾರಿಯಾಗಲಿಲ್ಲ. ಅದಾದ ಬಳಿಕ ಬಂದ ಸರ್ಕಾರದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸಹ ಮೀಟಿಂಗ್ ಕರೆಯುತ್ತೇನೆ ಎಂದು ಹೇಳುತ್ತಲೇ ಇದ್ದಾರೆ, ಇದುವರೆಗೂ ಸಭೆ ಕರೆಯಲಿಲ್ಲ. ಈ ಹಿನ್ನೆಲೆ ಮತ್ತೆ ನಾವು ರಾಷ್ಟ್ರೀಯ ಹೆದ್ದಾರಿ ತಡೆದು, ನಡು ರಸ್ತೆ ಮೇಲೆ ಇಷ್ಟಲಿಂಗ ಪೂಜೆಯ ಮೂಲಕ ಹೋರಾಟ ಮಾಡಲಾಯಿತು. ಆ ಸಮಯದಲ್ಲಿ ಡಿಸೆಂಬರ್ ೧೨ರಂದು ನಮ್ಮನ್ನು ಕರೆದು ಶೀಗ್ರದಲ್ಲಿ ಸಭೆ ಕರೆಯುತ್ತೇನೆ ಎಂದು ಹೇಳಿದವರು ಸುಳ್ಳು ಹೇಳುತ್ತಲೇ ಇದ್ದಾರೆ. ಕೇವಲ ಒಂದು ವಾರದಲ್ಲಿ ಸಭೆ ಕರೆಯುತ್ತೇನೆ ಎಂದು ಹೇಳಿದ ಅವರು, ಇದುವರೆಗೂ ಸಭೆ ಕರೆದಿಲ್ಲ.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ, ಲಕ್ಷ್ಮಿ ಹೆಬ್ಬಾಳ್ಕರ್, ಸಿದ್ದು ಸವದಿ ಸೇರಿದಂತೆ ಸಮಾಜದ ಎಲ್ಲ ಜನಪ್ರತಿನಿಧಿಗಳು ಅಧಿವೇಶನದಲ್ಲಿ ಧ್ವನಿ ಎತ್ತಿದ್ದಾರೆ. ನಾವು ಸಹ ಎಲ್ಲ ಪಕ್ಷಗಳಲ್ಲಿರುವ ಸಮಾಜದ ಶಾಸಕರು, ಮಂತ್ರಿಗಳ ಮನೆಗೆ ಹೋಗಿ ಮನವಿ ಮಾಡಿದ್ದೇವೆ. ಆದರೆ ಅಧಿವೇಶನದಲ್ಲಿ ಸ್ಪೀಕರ್ ಅವರು ನಮ್ಮ ಶಾಸಕರಿಗೆ ಮಾತನಾಡಲು ಅವಕಾಶ ಕೊಡಲಿಲ್ಲ. ಶಾಸಕರ ಹಕ್ಕು ಮೊಟಕುಗೊಳಿಸಲಾಗಿದೆ ಎಂದು ಸ್ಪೀಕರ್ ವಿರುದ್ದ ರಾಜ್ಯಪಾಲರಿಗೆ ದೂರು ಕೊಟ್ಟಿದ್ದೆವು ಎಂದರು.
ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಬಿ.ಎಮ್.ಪಾಟೀಲ್ (ದೇವರಹಿಪ್ಪರಗಿ) ಮಾತನಾಡಿ, ೨ಎ ಮೀಸಲಾತಿಗಾಗಿ ಕಳೆದ ಮೂರೂವರೆ ವರ್ಷಗಳಲ್ಲಿ ೬ ವಿವಿಧ ಬಗೆಯಲ್ಲಿ ಹೋರಾಟಗಳನ್ನು ನಡೆಸಲಾಗಿದೆ. ಇದೀಗ ಸಮಾಜದ ವಕೀಲರ ಮೂಲಕ ೭ನೇ ವಿಧದ ಹೋರಾಟಕ್ಕೆ ಸಜ್ಜಾಗಿದ್ದೇವೆ. ಈ ಹಿನ್ನೆಲೆ ಎಲ್ಲ ತಾಲೂಕುಗಳಲ್ಲಿ ಸಭೆ ನಡೆಸಲಾಗಿದೆ. ಸಮಾಜದ ಎಲ್ಲ ವಕೀಲರು ಬೃಹತ್ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಇದು ಕೊನೆಯ ಹೋರಾಟ ಮಾಡಿ, ಕಾನೂನು ರೀತಿಯಲ್ಲೇ ನ್ಯಾಯ ಪಡೆದುಕೊಳ್ಳಲಾಗುವುದು.
ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಬಿ.ಎಂ.ಪೊಲೀಸಪಾಟೀಲ್, ನಿಂಗನಗೌಡ ಸೊಲಾಪುರ, ಶ್ರೀಶೈಲ ಬುಕ್ಕಣ್ಣಿ, ದಾನೇಶ ಅವಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

“ಸೆ.೨೨ರಂದು ಬೆಳಗಾವಿಯಲ್ಲಿ ನಡೆಸುವ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ಪರಿಷತ್‌ಗೆ ಜಿಲ್ಲೆಯ ಎಲ್ಲಾ ವಕೀಲರು ಭಾಗವಹಿಸಬೇಕು. ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಜಿಲ್ಲೆಯಿಂದಲೂ ೨೦೦ಕ್ಕೂ ಅಧಿಕ ವಕೀಲರು ಪಾಲ್ಗೊಳ್ಳಬೇಕು. ಈ ಮೂಲಕ ಸಮಾಜಕ್ಕೆ ೨ಎ ಮೀಸಲಾತಿ ಸಿಗುವಂತೆ ಶ್ರಮ ವಹಿಸಬೇಕು.”

– ಈರಣ್ಣ ಚಾಗಶೆಟ್ಟಿ
ವಿಜಯಪುರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಹಾಗೂ ಪಂಚಮಸಾಲಿ ಮುಖಂಡರು

ಸೆ.೨೨ರಂದು ವಕೀಲರ ಪರಿಷತ್ ಸಮಾವೇಶ ನಡೆಸಲಾಗುತ್ತಿದೆ. ನ್ಯಾಯಕ್ಕಾಗಿ ಈಗಾಗಲೇ ಪಾದಯಾತ್ರೆ, ಲಿಂಗಪೂಜೆ, ರಾಷ್ಟ್ರೀಯ ಹೆದ್ದಾರಿ ತಡೆ ಸೇರಿದಂತೆ ೬ ಹೋರಾಟಗಳು ಮುಗಿದಿವೆ. ಇದೀಗ ನಿವೃತ್ತ ನ್ಯಾಯಾಧೀಶರ ಸಲಹೆ ಪಡೆದು ಕಾನೂನು ಹೋರಾಟ ಶುರು ಮಾಡಲಾಗಿದೆ. ಜಿಲ್ಲೆಯಲ್ಲಿ ಆ.೨೧ ರಂದು ವಕೀಲರ ಪೂರ್ವಭಾವಿ ಸಭೆ ನಡೆಸಿದ್ದೆವು. ಸಮಾಜದ ಎಲ್ಲ ವಕೀಲರು ಹೋರಾಟದಲ್ಲಿ ಭಾಗವಹಿಸಲಿದ್ದು, ಸೆ. ೨೨ರಂದು ಜಿಲ್ಲೆಯಿಂದ ೨೦೦ಕ್ಕೂ ಅಧಿಕ ವಕೀಲರು ತೆರಳಿ, ಹಕ್ಕೊತ್ತಾಯ ಮಂಡಿಸಿ ಒತ್ತಾಯಿಸಲಾಗುವುದು. ಸಿಎಂ ಸಿದ್ಧರಾಮಯ್ಯ ಅವರು ತಕ್ಷಣ ಶ್ರೀಗಳ ಹಾಗೂ ವಕೀಲರ ಸಭೆ ಕರೆದು ಮಾತನಾಡಬೇಕು.”

– ಶ್ರೀಶೈಲ ಮುಳಜಿ
ನ್ಯಾಯವಾದಿ ಹಾಗೂ ಪಂಚಮಸಾಲಿ ಮುಖಂಡರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.