ಉದಯರಶ್ಮಿ ದಿನಪತ್ರಿಕೆ
ಬಬಲೇಶ್ವರ: ಜಿಲ್ಲಾ ಪಂಚಾಯತ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಶ್ರೀ ಶಾಂತವೀರ ಪ್ರೌಢ ಶಾಲೆ ಬಬಲೇಶ್ವರ ಇವರ ಸಹಯೋಗದಲ್ಲಿ 2024-25 ನೇ ಸಾಲಿನ ಪ್ರೌಢ ಶಾಲಾ ವಿಧ್ಯಾರ್ಥಿಗಳಿಗೆ ಮತ್ತು ವಿಜ್ಞಾನ ಬೋಧಕರಿಗೆ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯು ಸೆ.20 ರಂದು ಶುಕ್ರವಾರ ಶಾಂತವೀರ ಪ್ರೌಢ ಶಾಲೆ ಬಬಲೇಶ್ವರದಲ್ಲಿ ಜರುಗುವದು ಎಂದು ಉಮಾದೇವಿ ಸೊನ್ನದ ಉಪನಿರ್ದೇಶಕರು(ಅಭಿವೃದ್ಧಿ) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಅವರು ತಿಳಿಸಿದ್ದಾರೆ.
