ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವಿಜಯಪುರ ವತಿಯಿಂದ ೨೦೨೪-೨೫ನೇ ಸಾಲಿನ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಚಾರಿ ಕುರಿಗಾರರ ಗುರುತಿನಚೀಟಿ ಪಡೆಯಲು, ಕನಿಷ್ಠ ೨೦ಕ್ಕಿಂತ ಹೆಚ್ಚು ಕುರಿ ಅಥವಾ ಮೇಕೆಗಳನ್ನುಗಳನ್ನು ಹೊಂದಿರಬೇಕು.
ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ/ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆಗಳ ಪಶು ವೈದ್ಯಾಧಿಕಾರಿಗಳು/ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ ನಿಗದಿತ ನಮೂನೆಯನ್ನು ಪಡೆದುಕೊಂಡು ವಲಸೆ ಹೋಗುವದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆ/ಕಛೇರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವಿಜಯಪುರ ದೂರವಾಣಿ ಸಂಖ್ಯೆ: ೯೯೦೨೩೬೩೧೪೩ ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ವಿಜಯಪುರ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
