ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೪-೨೫ನೇ ಸಾಲಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ, ಪ್ರವರ್ಗ-೧ ರ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ಊಟ ಮತ್ತು ವಸತಿ ಸಹಾಯ ಯೋಜನೆಯ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ ೧೫, ೨೦೨೪ ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು https://ssp.postmatric.karnataka.gov.in ವೈಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೮೦೫೦೭೭೦೦೦೫ ಅಥವಾ https://bcwd.karnataka.gov.in ವೈಬ್ಸೈಟ್ ವೀಕ್ಷಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
