Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲಾ ಕಚೇರಿ ಸಂಕೀರ್ಣ ಕಾಮಗಾರಿಗೆ ಅನುಮೋದನೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲಾ ಕಚೇರಿ ಸಂಕೀರ್ಣ ಕಾಮಗಾರಿಗೆ ಅನುಮೋದನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೂ.55.60 ಕೋಟಿ ಕಾಮಗಾರಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ | ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯ ಜಿಲ್ಲಾ ಕಚೇರಿಗಳ ಸಂಕೀರ್ಣ ಹೊಸ ಕಟ್ಟಡ ನಿರ್ಮಾಣ ಕಾಮಗಾರಿಯ ರೂ. 55.60 ಕೋ. ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪೂಟ ಸಭೆಯಲ್ಲಿ ಜಿಲ್ಲಾ ಕಚೇರಿಗಳ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಯ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ವಿಜಯಪುರ ನಗರದ ಕನಕದಾಸ ಬಡಾವಣೆಯ ಬಾಲಭವನದ ಪಕ್ಕದಲ್ಲಿ ಆರು ಎಕರೆ ಸರಕಾರಿ ಜಾಗೆಯಲ್ಲಿ 10,510 ಚದರ ಮೀಟರ್ (1,13,000 ಚದರ ಅಡಿ) ಪ್ರದೇಶದಲ್ಲಿ ಜಿಲ್ಲಾ ಕಚೇರಿಗಳ ನೂತನ ಸಂಕೀರ್ಣ ನಿರ್ಮಾಣವಾಗಲಿದೆ. ನೆಲಮಹಡಿ ಸೇರಿದಂತೆ ಒಟ್ಟು ನಾಲ್ಕು ಮಹಡಿಗಳನ್ನು ಈ ಕಟ್ಟಡ ಒಳಗೊಂಡಿದ್ದು, ಸುಮಾರು 20 ನಾನಾ ಕಚೇರಿಗಳು, ದಾಖಲೆ ಕೊಠಡಿಗಳು, ಸಭಾಂಗಣ, ಬ್ಯಾಂಕ್, ಅಂಚೆ ಕಚೇರಿ, ವಿಡಿಯೋ ಕಾನ್ಪರೆನ್ಸ್ ಹಾಲ್, ವಾಚನಾಲಯ, ಕ್ಯಾಂಟಿನ್ ಹೊಂದಲಿದೆ.
ಈ ಮುಂಚೆ ಈ ಕಾಮಗಾರಿಗೆ ರೂ.49 ಕೋ. ಅಂದಾಜು ವೆಚ್ಚ ಪ್ರಸ್ತಾಪಿಸಲಾಗಿತ್ತು. ಈಗ ಕಟ್ಟಡದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗಲು ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ಪರಿಷ್ಕೃತ ಅಂದಾಜು ವೆಚ್ಚ ತಯಾರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಈ ಹಿನ್ನಲೆಯಲ್ಲಿ ರೂ. 55.60 ಕೋ. ಅಂದಾಜು ವೆಚ್ಚದ ವರದಿಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈಗ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಸಂಕೀರ್ಣದ ನಾಲ್ಕು ದಿಕ್ಕುಗಳಲ್ಲಿ ಪ್ರತ್ಯೇಕ ಸ್ಟೇರಕೇಸ್, ನಾಲ್ಕು ಲೀಪ್ಟಗಳು, ಆಂತರಿಕ ರಸ್ತೆಗಳು, ಕಂಪೌಂಡ್ ಗೋಡೆ ಹಾಗೂ ಉದ್ಯಾನ ಇರಲಿವೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.

ಕಟ್ಟಡದ ನೆಲ ಮಹಡಿಯಲ್ಲಿ..

ಈ ಕಟ್ಟಡದ ನೆಲ ಮಹಡಿಯಲ್ಲಿ ಸಂಸದರ ಕಚೇರಿ, ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ, ಕೆ.ಜಿ.ಐ.ಡಿ ಕಚೇರಿ, ಚುನಾವಣಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಖಜಾನೆ ಕಚೇರಿ ಇರಲಿದೆ. ಇವುಗಳ ಜೊತೆಗೆ ರಿಸೆಪ್ಷನ್, ಪೊಲೀಸ್ ಚೆಕ್ ಪೋಸ್ಟ್, ಕಂಟ್ರೋಲ್ ರೂಂ, ಗ್ರಂಥಾಲಯ, ಬ್ಯಾಂಕ್, ಸಕಾಲ, ಪೋಸ್ಟ್ ಆಫೀಸ್, ಕ್ಯಾಂಟೀನ್, ಸ್ಪಂದನಾ ಕೌಂಟರ್, ಕೆ.ಎಸ್.ಡಬ್ಲ್ಯೂ.ಎ.ಎನ್ 1 ಮತ್ತು 2 ಸೇರಿದಂತೆ ಮಹಿಳೆಯರಿಗೆ ವಿಶ್ರಾಂತಿ ಕೊಠಡಿಗಳು ಇರಲಿವೆ.

ಮೊದಲನೇ ಮಹಡಿಯಲ್ಲಿ..

ಕಟ್ಟಡದ ಮೊದಲನೇ ಮಹಡಿಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ, ಆಹಾರ ಮತ್ತು ಸರಬರಾಜು ಇಲಾಖೆ, ಅಪರ ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ನಗರಾಭಿವೃದ್ಧಿ ಕೋಶ (ಡಿಯುಡಿಸಿ), ಎರಡು ಕೇಂದ್ರ ದಾಖಲೆ ಕೋಠಡಿಗಳು ಇರಲಿವೆ.

ಎರಡನೇ ಮಹಡಿಯಲ್ಲಿ..

ಎರಡನೇ ಮಹಡಿಯಲ್ಲಿ ಉಪವಿಭಾಗಾಧಿಕಾರಿ(ಎ.ಸಿ) ಕಚೇರಿ, ಜಿಲ್ಲಾ ಭೂ ದಾಖಲೆಗಳ ಉಪನಿರ್ದೇಶಕರ ಮತ್ತು ಸಹಾಯಕ ನಿರ್ದೇಶಕರ ಕಚೇರಿ ಮತ್ತು ನಗರ ಸರ್ವೇ ಕಚೇರಿ ಇರಲಿವೆ. ಅಲ್ಲದೇ, ವಿಡಿಯೋ ಕಾನ್ಪರೆನ್ಸ್ ಕೊಠಡಿ ಹಾಗೂ 300 ಜನ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣ ಇರಲಿವೆ.

ಮೂರನೇ ಮಹಡಿಯಲ್ಲಿ..

ಮೂರನೇ ಮಹಡಿಯಲ್ಲಿ ಸಹಕಾರಿ ಸಂಘಗಳು, ಎನ್. ಐ. ಸಿ, ಗಣಿ ಮತ್ತು ಭೂ ವಿಜ್ಞಾನ, ಜವಳಿ, ವಕ್ಫ್, ಅಂಕಿಸಂಖ್ಯೆಗಳ ಕಚೇರಿ ಹಾಗೂ ಪ್ರವಾಸೋಧ್ಯಮ ಇಲಾಖೆ ಕಚೇರಿ ಜೊತೆಗೆ 100 ಜನ ಕುಳಿತುಕೊಳ್ಳುವ ಸಾಮರ್ಥ್ಯದ ಸಭಾಂಗಣ ಸೌಲಭ್ಯಗಳು ಇರಲಿವೆ.
ಅಲ್ಲದೇ, ಪ್ರತಿಯೊಂದು ಮಹಡಿಯಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ಶೌಚಾಲಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಷ್ಟೇ ಅಲ್ಲ, ಈ ಕಟ್ಟಡದಲ್ಲಿ ಪಾರ್ಕಿಂಗ್, ಸಿವಿಲ್ ಕಾಮಗಾರಿಗಳ ಜೊತೆಗೆ ಪಿಠೋಪಕರಣಗಳು ಮತ್ತು ಸಕಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.