ಉದಯರಶ್ಮಿ ದಿನಪತ್ರಿಕೆ
ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಅಕ್ಷರ ದಾಸೋಹ ತಾಲೂಕಾಧಿಕಾರಿ ಸುಜಾತಾ ಪೂಜಾರಿ ಹೇಳಿದರು.
ಅವರು ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಹಿರೇರೂಗಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಭಾ ಕಾರಂಜಿಯ ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ಮಾತನಾಡಿ, ಮಕ್ಕಳಿಗೆ ಉನ್ನತ ಶಿಕ್ಷಣದೊಂದಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು.
ಸಿ ಆರ್ ಪಿ ಸಂತೋಷ ಚವ್ಹಾಣ ಪ್ರಾಸ್ತಾವಿಕವಾಗಿ
ಮಾತನಾಡಿ, ಪ್ರತಿಭಾವಂತರನ್ನು ಗುರುತಿಸುವ ಕಾರ್ಯ ಶಿಕ್ಷಕರಿಂದಾಗಬೇಕು. ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.
ಶಿಕ್ಷಣ ಸಂಯೋಜಕ ಸಿ ಬಿ ಬಿರಾದಾರ, ಎಸ್ ಡಿ ಎಂ ಸಿ ಅಧ್ಯಕ್ಷ ಮಾಳಪ್ಪ ಪೂಜಾರಿ, ಉಪಾಧ್ಯಕ್ಷ ರಮೇಶ ಮಠಪತಿ,
ಪರಶುರಾಮ ಹೊಸಮನಿ, ಶಿವಾನಂದ ಹೊಸಮನಿ, ರಾಜಶೇಖರ ಗುಡಿ, ಸಲೀಮ್ ಅಂಗಡಿ, ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವ್ಹಿ ವೈ ಪತ್ತಾರ, ಎಸ್ ಎಸ್ ಅರಬ, ಶಿಕ್ಷಕರಾದ ಎಸ್ ಆರ್ ಚಾಳೇಕರ, ಸಂತೋಷ ಬಂಡೆ, ಎಸ್ ಎಂ ಪಂಚಮುಖಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ ಸೇರಿದಂತೆ ಕ್ಲಸ್ಟರ್ ವ್ಯಾಪ್ತಿಯ ಎಲ್ಲ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು,ಮಕ್ಕಳು ಭಾಗವಹಿಸಿದ್ದರು.

