ಶಿಕ್ಷಣ ಇಲಾಖೆ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಶಿಕ್ಷಣ ಇಲಾಖೆ ಆಯೋಜಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ನಮಗೆ ಅನ್ಯಾಯ ಮಾಡಲಾಗಿದೆ. ಕೂಡಲೇ ಈ ಬಗ್ಗೆ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಸರಕೋಡದ ಸಂಗಮೇಶ ಕಟಾರೆ ಮತ್ತು ಬಸವರಾಜ ಬಿರಾದಾರ ಆರೋಪಿಸಿದ್ದಾರೆ.
ಈ ಕುರಿತು ಮಾಧ್ಯಮಕ್ಕೆ ಚಿತ್ರೀಕರಿಸಿದ ವಿಡಿಯೋ ಮೂಲಕ ಮಾಹಿತಿ ನೀಡಿದ ಅವರು, ಬುಧವಾರ ತಾಲೂಕಿನ ಯರಝರಿ ಗ್ರಾಮದಲ್ಲಿ ನಡೆದ ಪ್ರಾಥಮಿಕ ಶಾಲೆಗಳ ಹೋಬಳಿ ಮಟ್ಟದ ಕ್ರೀಡಾಕೂಟದ ಖೋಖೋ ಆಟದಲ್ಲಿ ಯರಝರಿ ಶಾಲೆಯವರು ಇಬ್ಬರು ಪ್ರೌಢ ಶಾಲೆಯ ವಿದ್ಯಾರ್ಥಿಗಳನ್ನು ಸೇರಿಸಿಕೊಂಡು ಆಟವಾಡಿ ಗೆದ್ದಿರುತ್ತಾರೆ. ಇದರಿಂದ ನಮ್ಮೂರ ಶಾಲೆಯ ಕ್ರೀಡಾಪಟುಗಳಿಗೆ ಅನ್ಯಾಯವಾಗಿದೆ. ಶಿಕ್ಷಣ ಇಲಾಖೆ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಮತ್ತೊಮ್ಮೆ ಆಟವಾಡಿಸಬೇಕು. ಜೊತೆಗೆ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

