Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಕ್ಕಮಹಾದೇವಿ ಮಹಿಳಾ ವಿವಿ: ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಅಕ್ಕಮಹಾದೇವಿ ಮಹಿಳಾ ವಿವಿ: ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ೨೦೨೪-೨೫ನೆಯ ಶೈಕ್ಷಣಿಕ ಸಾಲಿನ ಸ್ನಾತಕೋತ್ತರ ಪದವಿ, ಪಿಜಿ ಡಿಪ್ಲೋಮಾ, ವ್ಯಾಲ್ಯು ಆಡೆಡ್ ಡಿಪ್ಲೋಮಾ ಮತ್ತು ಸರ್ಟಿಫಿಕೇಟ್ ಕೋರ್ಸ್ಗಳ ಪ್ರಥಮ ವರ್ಷಕ್ಕೆ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯುಯುಸಿಎಂಎಸ್ ತಂತ್ರ‍್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ ಪದವಿಯ ೬ನೆಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶಕ್ಕಾಗಿ ಕಾಯುವ ಅಗತ್ಯವಿಲ್ಲ. ಐದು ಸೆಮಿಸ್ಟರ್‌ಗಳ ಅಂಕಪಟ್ಟಿಯೊಂದಿಗೆ ಈಗಲೇ ಅರ್ಜಿ ಸಲ್ಲಿಸಿ. ಪರೀಕ್ಷಾ ಫಲಿತಾಂಶ ಬಂದ ನಂತರ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಆಯಾ ವಿಭಾಗಗಳಿಗೆ ೬ನೆಯ ಸೆಮಿಸ್ಟರ್ ಅಂಕಪಟ್ಟಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ ೨೦ ಕೊನೆಯ ದಿನವಾಗಿದ್ದು ಯುಯುಸಿಎಂಎಸ್ https://uucms.karnataka.gov.in/Login/Indexತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಸಲ್ಲಿಸಿರುವ ಅರ್ಜಿಯ ಪ್ರತಿಯನ್ನು ವಿಶ್ವವಿದ್ಯಾನಿಲಯದ ಕಚೇರಿಗೆ ಅಥವಾ ಆಯಾ ಸ್ನಾತಕೋತ್ತರ ವಿಭಾಗಗಳ ಮುಖ್ಯಸ್ಥರಿಗೆ ಅ.೨೧ರೊಳಗೆ ಸಲ್ಲಿಸಬೇಕು. ವಿದ್ಯಾರ್ಥಿನಿಯರ ಆಯ್ಕೆಯನ್ನು ಮೆರಿಟ್ ಹಾಗೂ ರೋಸ್ಟರ್ ಆಧಾರದ ಮೇಲೆ ಮಾಡಲಾಗುವುದು. ಆಪ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಪ್ರವೇಶಾತಿಯನ್ನು ಕೌನ್ಸೆಲಿಂಗ್ ಮೂಲಕ ನೀಡಲಾಗುವುದು ಮತ್ತು ಕೌನ್ಸೆಲಿಂಗ್ ದಿನಾಂಕವನ್ನು ವಿಶ್ವವಿದ್ಯಾನಿಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
ಮಹಿಳಾ ವಿಶ್ವವಿದ್ಯಾಲಯದಲ್ಲಿ ಸದ್ಯ ಈ ಕೆಳಗಿನ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದ್ದು ಆಸಕ್ತ ವಿದ್ಯಾರ್ಥಿನಿಯರು ಪ್ರವೇಶ ಪಡೆದುಕೊಳ್ಳಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಅವರು ಇಂದು ಇಲ್ಲಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲಭ್ಯವಿರುವ ಕೋರ್ಸ್ಗಳು: ಕಲಾ ನಿಕಾಯ: ಎಂ.ಎ- ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಪ್ರದರ್ಶಕ ಕಲೆಗಳ ವಿಭಾಗ (ಎಂ.ಮ್ಯೂಜಿಕ್-ಹಿಂದೂಸ್ತಾನಿ ಮ್ಯೂಜಿಕ್), ಸಮಾಜ ವಿಜ್ಞಾನ ನಿಕಾಯ: ಎಂ.ಎ.: ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ, ಮಹಿಳಾ ಅಧ್ಯಯನ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ. ಗ್ರ‍್ರಂಥಾಲಯ ಮತ್ತು ಮಾಹಿತಿ ವಿಜ್ಞಾನ (ಎಂಎಲ್‌ಐಸಿ) ಮತ್ತು ಮಾಸ್ಟರ್ ಆಫ್ ಸೋಶಿಯಲ್ ವರ್ಕ್ (ಎಂಎಸ್‌ಡಬ್ಲು), ವಿಜ್ಞಾನ ನಿಕಾಯ: ಎಂ.ಎಸ್.ಸಿ.- ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ ೇಸಂಖ್ಯಾಶಾಸ್ತ್ರ, ಜೈವಿಕ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಆಹಾರ ಸಂಸ್ಕರಣೆ ಮತ್ತು ಪೌಷ್ಟಿಕ, ಕಂಪ್ಯೂಟರ್ ಸೈನ್ಸ್ ಶಿಕ್ಷಣ ನಿಕಾಯ: ಎಂ.ಈಡಿ, ಬಿಪಿಈಡಿ, ಎಂ.ಪಿ.ಈಡಿ, ವಾಣಿಜ್ಯ ನಿಕಾಯ: ಎಂ.ಕಾಂ. ಅಲ್ಲದೇ ಎಂಸಿಎ. ಮತ್ತು ಎಂಬಿಎ, ಪದವಿಗಳ ಉಳಿಕೆ ಸೀಟುಗಳ ಪ್ರವೇಶಕ್ಕೆ ಆಯಾ ವಿಭಾಗಕ್ಕೆ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಪಿಜಿ ಡಿಪ್ಲೋಮಾ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ, ಇಂಗ್ಲಿಷ್‌ನಲ್ಲಿ ಭಾಷಾಂತರ, ಮ್ಯೂಜಿಕ್, ಮಹಿಳಾ ಸಬಲೀಕರಣ, ನ್ಯೂಟ್ರಿಷಿಯನ್ ಮತ್ತು ಡಯಟಿಕ್ಸ್, ಸ್ಪೋರ್ಟ್ಸ ನ್ಯೂಟ್ರಿಷಿಯನ್, ಯೋಗಾ ಸ್ಟಡೀಸ್. ಸರ್ಟಿಫಿಕೇಟ್ ಕೋರ್ಸ್ ಇನ್- ಲೈಬ್ರರಿ ಸೈನ್ಸ್. ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ, ಯೋಗಾ ಸ್ಟಡೀಸ್, ಮ್ಯೂಜಿಕ್, ಮತ್ತು ಇಂಗ್ಲಿಷ್ ಭಾಷಾಂತರ ಮತ್ತು ಗ್ರಾಫಿಕ್ ಡಿಸೈನ್. ವ್ಯಾಲ್ಯೂ ಆಡೆಡ್ ಸರ್ಟಿಫಿಕೇಟ್/ ಡಿಪ್ಲೋಮಾ/ ಅಡ್ವಾನ್ಸ್ ಡಿಪ್ಲೋಮಾ ಇನ್ ಎಂಎಲ್‌ಐಎಸ್‌ಸಿ/ಜೆಎಂಸಿ.
ಅತ್ಯಾಧುನಿಕ ಸೌಲಭ್ಯಗಳು: ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್ ಕ್ಲಾಸ್‌ರೂಂ, ಮಲ್ಟಿಮೀಡಿಯಾ ಲ್ಯಾಬ್ ಮತ್ತು ಲಾಂಗ್ವೇಜ್ ಲ್ಯಾಬ್, ಸುಸಜ್ಜಿತ ಪ್ರಯೋಗಾಲಯಗಳು, ಸುಸಜ್ಜಿತ ಹಾಸ್ಟೆಲ್ ವ್ಯವಸ್ಥೆ, ಸಾಪ್ಟವೇರ್ ಟೆಕ್ನಾಲಜಿ ಪಾರ್ಕ್ , ೨೪x೭ ಇಂಟರ್‌ನೆಟ್ ಸೌಲಭ್ಯ, ಮಕ್ಕಳ ಲಾಲನೆ-ಪಾಲನೆಗೆ ಡೇಕೇರ್ ಸೆಂಟರ್, ನಗರದ ವಿವಿಧ ಭಾಗಗಳಿಂದ ವಿಶ್ವವಿದ್ಯಾಲಯಕ್ಕೆ ವಾಹನ ವ್ಯವಸ್ಥೆ ಮುಂತಾದ ಸೌಲಭ್ಯಗಳಲ್ಲಿ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಒದಗಿಸಲಾಗಿದೆ.
ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಅವರ ನೇತೃತ್ವದಲ್ಲಿ ಮಹಿಳೆಯರು ಸುಲಭವಾಗಿ, ಆಕರ್ಷಕವಾಗಿ ಮತ್ತು ಕೈಗೆಟುಕುವ ದರದಲ್ಲಿ ಉನ್ನತ ಶಿಕ್ಷಣ ಪಡೆಯಲು ಸೂಕ್ತ ವಾತಾವರಣ ನಿರ್ಮಾಣ ಮಾಡುವಲ್ಲಿ ಮಹಿಳಾ ವಿಶ್ವವಿದ್ಯಾಲಯ ಹಲವಾರು ಕ್ರಮಗಳನ್ನು ಕೈಕೊಂಡಿದೆ. ಪ್ರವೇಶ ಮತ್ತು ಪರೀಕ್ಷಾ ಶುಲ್ಕ ಹಾಗೂ ಕಾಲೇಜುಗಳಿಗೆ ವಿಧಿಸುವ ಸಂಲಗ್ನ ಶುಲ್ಕಗಳು ಕಡಿಮೆಯಿವೆ. ಜ್ಞಾನ ಸಂಪಾದಿಸುವ ಆಸಕ್ತಿಯುಳ್ಳ ಮಹಿಳೆಯರು, ಉನ್ನತ ಶಿಕ್ಷಣವನ್ನು ಪಡೆಯುವ ಹಂಬಲ ಮತ್ತು ಬಲವನ್ನು ಹೊಂದಿದವರಿಗೆ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶಿಷ್ಟ ರೀತಿಯ ಪಠ್ಯಕ್ರಮವನ್ನು ರೂಪಿಸಲಾಗಿದೆ. ಇಲ್ಲಿನ ವಿದ್ಯಾರ್ಥಿನಿಯರು ತಾವು ಓದುತ್ತಿರುವ ಕೋರ್ಸ್ನ ವಿಷಯಗಳಲ್ಲದೇ ಇತರ ವಿಷಯಗಳಲ್ಲಿ ಒಂದೊಂದು ವಿಷಯವನ್ನು ಪ್ರತಿ ಸೆಮಿಸ್ಟರ್‌ನಲ್ಲಿ ಓದುವ ಅವಕಾಶ ಕಲ್ಪಿಸಲಾಗಿದೆ ಎಂದೂ ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರÀ- ೫೮೬೧೦೮. ದೂರವಾಣಿ ಸಂಖ್ಯೆ: ೦೮೩೫೨-೨೯೭೦೬೨, ೭೭೯೫೧೨೨೯೬೦, ೭೨೦೪೮೮೯೮೫೫ ಮತ್ತು ೯೯೦೧೮೨೭೬೯೬; ತಿebsiಣe: ತಿತಿತಿ.ಞsತಿu.ಚಿಛಿ.iಟಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.