ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ರಾಷ್ಟ್ರೋತ್ಥಾನ ಪರಿಷತ್ತು ಬೆಂಗಳೂರು, ದರ್ಬಾರ್ ಪದವಿ ಮಹಾವಿದ್ಯಾಲಯ ವಿಜಯಪುರ ಇವರುಗಳ ಸಯೋಗದಲ್ಲಿ ವಿಜಯಪುರ ಜಿಲ್ಲೆಯ ಶಿಕ್ಷಣ ಮಹಾವಿದ್ಯಾಲಯಗಳ ಪ್ರಶಿಕ್ಷಣಾರ್ಥಿಗಳಿಗೆ ನಡೆಸಿದ ಸ್ವಸ್ಥ ಸುಸ್ಥಿರ ಸಮಾಜ ನಿರ್ಮಾಣ ಕುರಿತಾದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸಿಂದಗಿಯ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ್ ಶಿಕ್ಷಣ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿ ದೌಲತರಾಯ ಗೊಬ್ಬುರ ಇಂಗ್ಲೀಷ್ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಕನ್ನಡ ವಿಭಾಗದಲ್ಲಿ ಅಶ್ವಿನಿ ಕೋರೆ ಜಿಲ್ಲಾ ಮಟ್ಟಕ್ಕೆ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಪ್ರಾಚಾರ್ಯ ಜೆ.ಸಿ.ನಂದಿಕೋಲ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

