Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರದಿಂದ ಕಾಮಗಾರಿಗಳ ವಿವರ ಕೋರಿದ ರಾಜ್ಯಪಾಲರು
(ರಾಜ್ಯ ) ಜಿಲ್ಲೆ

ಸರ್ಕಾರದಿಂದ ಕಾಮಗಾರಿಗಳ ವಿವರ ಕೋರಿದ ರಾಜ್ಯಪಾಲರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಎಂ ಮೌಖಿಕ ಸೂಚನೆ ಮೇರೆಗೆ ಕೈಗೆತ್ತಿಕೊಂಡ ಕಾಮಗಾರಿಗಳ ವರದಿ ನೀಡಲು ಮುಖ್ಯ ಕಾರ್ಯದರ್ಶಿಗೆ ಸೂಚನೆ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರು ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೌಖಿಕ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಶ್ರೀರಂಗಪಟ್ಟಣ, ವರುಣಾ ಕ್ಷೇತ್ರದಲ್ಲಿ 387 ಕೋಟಿ ರೂಪಾಯಿ ವೆಚ್ಚದ ಕಾಮಗಾರಿಗಳನ್ನು ಕೈಗೊಂಡಿರುವ ಕುರಿತಂತೆ ವಿಸ್ತೃತ ವರದಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ರಾಜ್ಯಪಾಲರು ಸೂಚಿಸಿದ್ದಾರೆ.
ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಮೂಲದ ಪಿಎಸ್​ ನಟರಾಜ್​ ಎಂಬವರು ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ನೀಡಿದ್ದು ಸೆಕ್ಷನ್ 15 ಮತ್ತು 25 ಉಲ್ಲಂಘಿಸಿ ಮುಡಾ 387 ಕೋಟಿ ರೂ.ಗಳ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ. ಪ್ರಾಧಿಕಾರದಲ್ಲಿ ಹಣ ಇಲ್ಲದಿದ್ದರೂ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಪ್ರಾಧಿಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು. ಹೀಗಾಗಿ ಸಿಬಿಐ ತನಿಖೆಗೆ ಸೂಚಿಸುವಂತೆ ಪತ್ರದಲ್ಲಿ ಬರೆದಿದ್ದಾರೆ.
ಈ ಆರೋಪವು ಗಂಭೀರ ಸ್ವರೂಪದ್ದಾಗಿದ್ದು ಈ ವಿಷಯವನ್ನು ಪರಿಶೀಲಿಸಲು ಮತ್ತು ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಶೀಘ್ರವಾಗಿ ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನಿರ್ದೇಶಿಸಿದ್ದಾರೆ.

ಆದೇಶಗಳನ್ನು ಕಾಯ್ದಿರಿಸಿದ ಹೈಕೋರ್ಟ್

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ಗೆಹ್ಲೋಟ್‌ರ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸೆ.12ರಂದು ಹೈಕೋರ್ಟ್ ಪೂರ್ಣಗೊಳಿಸಿ, ಆದೇಶಗಳನ್ನು ಕಾಯ್ದಿರಿಸಿದೆ. ಆಗಸ್ಟ್ 19ರಂದು ರಾಜ್ಯಪಾಲರ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬಿಎಂ ಪಾರ್ವತಿ ಅವರಿಗೆ ಮುಡಾ ಸ್ವಾಧೀನಪಡಿಸಿಕೊಂಡಿರುವ ನಿವೇಶನಕ್ಕಿಂತ ಹೆಚ್ಚಿನ ಆಸ್ತಿ ಮೌಲ್ಯದ ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮುಡಾ ಪಾರ್ವತಿ ಅವರಿಗೆ 50:50 ಅನುಪಾತದ ಯೋಜನೆಯಡಿ ಅವರ 3.16 ಎಕರೆ ಜಮೀನಿನ ಬದಲಾಗಿ 14 ನಿವೇಶನಗಳನ್ನು ಮಂಜೂರು ಮಾಡಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.