ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮಹಾವಿದ್ಯಾಲಯಗಳ ಜಿಲ್ಲಾ ಮಟ್ಟದ ನೆಟ್ ಬಾಲ್‌ನಲ್ಲಿ ಬಾಲಕ ಮತ್ತು ಬಾಲಕಿಯರ ವಿಭಾಗ ಮತ್ತು ಚೆಸ್‌ನಲ್ಲಿ ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಇರ್ವ ವಿದ್ಯಾರ್ಥಿನಿಯರು ಭಾಗವಹಿಸಿ ಒಟ್ಟು ೧೪ ಜನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಉಪನ್ಯಾಸಕ ಗವಿಸಿದ್ದಪ್ಪ ಆನೆಗುಂದಿ ಹಾಗೂ ವಿದ್ಯಾರ್ಥಿಗಳಿಗೆ ಸಂಸ್ಥೆಯ ಚೇರಮನ್ನರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಆಡಳಿತ ಮಂಡಳಿಯ ಸರ್ವ ಸದಸ್ಯರು, ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

