ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸುರಸಿಂಗಾರ ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯು ಕನ್ನಡ ಮತ್ರು ಸಂಸ್ಕೃತಿ ಇಲಾಖೆಯ ಧನಸಹಾಯದಲ್ಲಿ
“ಅನಂತ ನಮನ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ”ವನ್ನು ಶನಿವಾರ ದಿನಾಂಕ ಸೆ.21 ರಂದು ಸಂಜೆ 6-30ಕ್ಕೆ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಶಾಸ್ತ್ರೀಯ ಸಂಗೀತ ವನ್ನು ಧಾರವಾಡದ ಪಂ. ಕುಮಾರ ಮರಡೂರ ಪ್ರಸ್ತುತ ಪಡಿಸಲಿದ್ದಾರೆ ಇವರ, ಗಾಯನಕ್ಕೆ ಸತೀಶ್ ಭಟ್ ಹೆಗ್ಗಾರ್ ಹಾರ್ಮೋನಿಯಂ ಮತ್ತು ಗಣೇಶ್ ಗುಂಡಕಲ್ ಅವರು ತಬಲಾಸಾಥ್ ನೀಡಲಿದ್ದಾರೆ. ಕಾರ್ಯಕ್ರಮ ಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ಆಸಕ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸುರಸಿಂಗಾರದ ಕಾರ್ಯದರ್ಶಿ ಸಂಗಣ್ಣ ಪಾಟೀಲ್ ಪ್ರಕಟಣೆಯಲ್ಲಿ ಕೋರಿದ್ದಾರೆ.

