ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕೆಪಿಟಿಸಿಎಲ್ ವತಿಯಿಂದ ೨ನೇ ತ್ರೈಮಾಸಿಕ ನಿರ್ವಹಣ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ೨೨ರಂದುದು ೧೧೦/೧೧ಕೆವಿ ವಿದ್ಯುತ್ ವಿತರಣ ಕೇಂದ್ರ ಭೂತನಾಳ ಹಾಗೂ ಸೆಪ್ಟೆಂಬರ್ ೨೪ರಂದು ೧೧೦/೧೧ ಕೆವಿ ವಿದ್ಯುತ್ ವಿತರಣ ಕೇಂದ್ರ ಕೆಐಎಡಿಬಿ, ಜುಮನಾಳ, ವಿಜಯಪುರ ಸಿಟಿ, ಮತ್ತು ೨೨೦/೧೧೦ ಕೆವಿ ಸ್ವೀಕರಣಾ ಕೇಂದ್ರದಿಂದ ಹೊರಹೋಗುವ ಎಲ್ಲಾ ೧೧ಕೆವಿ ವಿದ್ಯುತ್ ಮಾರ್ಗಗಳಿಗೆ ಸದರಿ ದಿನದಂದು ಬೆಳಿಗ್ಗೆ ೯ರಿಂದ ೩ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕು ಎಂದು ವಿಜಯಪುರ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.
