ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೋಂದಾ ಸ್ವರ್ಣವಲ್ಲೀ ಶ್ರೀಗಳಾದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಶ್ರೀ ಭಗವದ್ಗೀತಾ ಅಭಿಯಾನದ ನಿಮಿತ್ಯ ವಿಜಯಪುರ ನಗರಕ್ಕೆ ಆಗಮಿಸಿದ್ದು ವಿವಿಧ ಸೋಂದಾ ಸ್ವರ್ಣವಲ್ಲೀ ಶ್ರೀಗಳಾದ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ಶ್ರೀ ಭಗವದ್ಗೀತಾ ಅಭಿಯಾನದ ನಿಮಿತ್ಯ ವಿಜಯಪುರ ನಗರಕ್ಕೆ ಆಗಮಿಸಿದ್ದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸೆ.22, ರವಿವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ರುಕ್ಮಾಂಗದ ಪಂಡಿತರ ಸಮಾಧಿಯಲ್ಲಿ ನಡೆಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರ ಹಾಗೂ ಶಿಕ್ಷಕರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 4 ಗಂಟೆಗೆ ,ಇದೇ ಸ್ಥಳದಲ್ಲಿ ನಡೆಯುವ ವಿಜಯಪುರ ಜಿಲ್ಲೆಯ ಶ್ರೀ ಭಗವದ್ಗೀತಾ ಅಭಿಯಾನ ತಾಲೂಕಾ ಸಮಿತಿಗಳ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ.
ಸೆ.23, ಸೋಮವಾರ ಸಂಜೆ 4 ಗಂಟೆಗೆ ಜಿಲ್ಲೆ ಸಮಿತಿ, ಕೋರ್ ಕಮಿಟಿ, ಹಾಗೂ ಮಹಿಳಾ ಸಮಿತಿ ಸಭೆಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ವಿಜಯಪುರ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಂಗನಗೌಡ ಪಾಟೀಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
