ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಸೇವಾನಿರತ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಿಕ್ಷಕರಿಗೆ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಆಕ್ಟೋಬರ್ ೧೫ರಂದು ಕೊನೆಯ ದಿನವಾಗಿದ್ದು,
ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕನಕದಾಸ ಬಡಾವಣೆ, ಜಿಲ್ಲಾ ಪಂಚಾಯತ ಆವರಣ, ವಿಜಯಪುರ ದೂರವಾಣಿ ಸಂಖ್ಯೆ: ೦೮೩೫೨-೭೯೬೦೬೦ ಅಥವಾ ವೆಬ್ ಸೈಟ್ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ಗೆ ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ಸವಿತಾ ಕಾಳೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
