ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸೆಪ್ಟೆಂಬರ್ ೨೨ರಂದು ಮಧ್ಯಾಹ್ನ ೧೨ ಗಂಟೆಗೆ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ ಸಮಾರಂಭ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಅವರು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಹಾಗೂ ವಿಧಾನ ಪರಿಷತ್ತಿನ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಚ್. ಎಂ. ರೇವಣ್ಣ, ಸಂಸದರಾದ ರಮೇಶ ಜಿಗಜಿಣಗಿ, ಶ್ರೀಮತಿ ಸುಧಾ ಮೂರ್ತಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್. ಪಾಟೀಲ(ಬ್ಯಾಡಗಿ), ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರಿ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯ್ಕ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಮಹಾನಗರ ಪಾಲಿಕೆಯ ಮೇಯರ್ ಮಹೇಜಬಿನ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಮುಶ್ರೀಫ್ ಸೇರಿದಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸೇರಿದಂತೆ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
