ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ೨೦೨೪-೨೫ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯಲ್ಲಿ ವಾಸವಾಗಿರುವ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಸೆಪ್ಟೆಂಬರ್ ೩೦ರ ಒಳಗಾಗಿ sತಿ.ಞಚಿಡಿ.ಟಿiಞ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಅರ್ಜಿ ನಮೂನೆ ಹಾಗೂ ಅಗತ್ಯ ದೃಡೀಕೃತ ದಾಖಲೆಗಳ ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಸಲ್ಲಿಸತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
