ವಿಜಯಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ ಬಬಲೇಶ್ವರ ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ಸಾಂಕೇತಿಕವಾಗಿ ತಮ್ಮ ನಾಮಪತ್ರ ಸಲ್ಲಿಸಿದರು.
ಬಬಲೇಶ್ವರ ಪಟ್ಟಣದಲ್ಲಿರುವ ನೀರಾವರಿ ಇಲಾಖೆ ಕಚೇರಿಗೆ ಆಗಮಿಸಿದ ಎಂ. ಬಿ. ಪಾಟೀಲ ಅವರು ಚುನಾವಣಾಧಿಕಾರಿ ಮಂಜುನಾಥ ಅವರಿಗೆ ಎರಡು ಸೆಟ್ ಗಳಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರೊ. ರಾಜು ಆಲಗೂರ, ಮುಖಂಡರಾದ ಎಚ್. ಎಸ್. ಕೊರಡ್ಡಿ, ವಿ. ಎಸ್. ಪಾಟೀಲ, ರಾಜೇಸಾಬ ಮುಲ್ಲಾ, ಕುಮಾರ ದೇಸಾಯಿ, ಬಿ. ಜಿ. ಬಿರಾದಾರ, ಪ್ರಕಾಶ ಸೊನ್ನದ, ಎಂ. ಎನ್. ಚೋರಗಸ್ತಿ ಉಪಸ್ಥಿತರಿದ್ದರು.