ಉದಯರಶ್ಮಿ ದಿನಪತ್ರಿಕೆ
ಇಂಡಿ: ತಾಲ್ಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ಭರದಿಂದ ನಡೆಯುತ್ತಿದ್ದು, ಅಪರಾಧ ಎಂದು ತಿಳಿದರೂ ಅಕ್ರಮ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಕಾರಣ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಎಂದು ದೂರಿದ ಕೆ ಆರ್ ಎಸ್ ಪಕ್ಷದ ಕಾರ್ಯಕರ್ತರು ಅಬಕಾರಿ ನಿರೀಕ್ಷಕ ನಾಯಿಕ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಗಣಪತಿ ರಾಠೋಡ ಮಾತನಾಡಿದ ಅವರು, ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಅಬಕಾರಿ ಇಲಾಖೆಯ ಅಧಿಕಾರಿಗಳು ವೈಫಲ್ಯ ಕಂಡಿದ್ದಾರೆ. ಸುಮಾರು 3 ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಅದಕ್ಕಾಗಿ ಅಕ್ರಮ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯ ಅಥವಾ ಅಧಿಕಾರಿಗಳ ಬಗ್ಗೆ ಕಿಂಚಿತ್ತೂ ಭಯವೇ ಇಲ್ಲ. ತಾಲ್ಲೂಕಿನ ಪ್ರತಿ ಹಳ್ಳಿಯಲ್ಲೂ ಅಕ್ರಮ ಮದ್ಯ ಹೆಚ್ಚಾಗಿ ಜನರ ಜೀವನ ಅಸ್ತವ್ಯಸ್ತತೆ ಕೂಡುತ್ತಿದೆ. ಅದಕ್ಕೆ ನೇರಹೊಣೆ ಅಬಕಾರಿ ಅಧಿಕಾರಿಗಳು ಹೊಣೆ ಹೊರಬೇಕಾಗುತ್ತದೆ. ಈ ಕೂಡಲೇ ಅಕ್ರಮ ಮದ್ಯ ತಡೆಗಟ್ಟಲು ಕಾನೂನು ಕ್ರಮಕೈಗೊಳ್ಳಬೇಕು. ಒಂದು ವೇಳೆ ಅಸಹಾಯಕತನ ತೋರಿದರೆ, ಉಗ್ರವಾದ ಪ್ರತಿಭಟನೆ ಮಾಡುತ್ತೆವೆ.
ಈ ಸಂದರ್ಭದಲ್ಲಿ ಕೆ ಆರ್ ಎಸ್ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಜಾಧವ, ಕಾರ್ಯದರ್ಶಿ ಲಕ್ಷ್ಮಣ್ ಚಡಚಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ದುರ್ಗಪ್ಪ ಬೂದಿಹಾಳ, ಚಡಚಣ ತಾಲೂಕು ಅಧ್ಯಕ್ಷ ಚಂದ್ರಕಾಂತ್ ನಗರೇ, ಅಣ್ಣಪ್ಪ ಪೂಜಾರಿ, ಕೆ ಆರ್ ಎಸ್. ಪಕ್ಷದ ಹಲವಾರು ಸೈನಿಕರು ಉಪಸ್ಥಿತರಿದ್ದರು.

