ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಸೆ.೨೩ ರಿಂದ ೨೪ ರವರೆಗೆ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಸೆ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರ್ನಾಟಕ ಸಂಭ್ರಮ-೫೦ ರ ಆಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸುವರು.
ಮಧ್ಯಾಹ್ನ ೧.೩೦ಕ್ಕೆ ವಿಜಯಪುರದಿಂದ ಹೊರಟು, ಸಂಜೆ ೪ಗಂಟೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಗುಡ್ಡಾಪೂರದಲ್ಲಿ ವಿಜಯಪುರದ ಅಪರ ಜಿಲ್ಲಾಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಇತರೆ ಅಧಿಕಾರಿಗಳೊಂದಿಗೆ ಶ್ರೀದಾನಮ್ಮ ದೇವಿ ದೇವಸ್ಥಾನದ ಸಭಾಂಗಣದಲ್ಲಿ ಸೆ.೩೦ರಂದು ನಡೆಯುವ ಕರ್ನಾಟಕ ಸಂಭ್ರಮ-೫೦ರ ಆಚರಣೆಗೆ ಸಂಬಂಧಿಸಿದಂತೆ ವೇದಿಕೆ ಮತ್ತು ಇತರ ವ್ಯವಸ್ಥೆಗಳ ಕುರಿತು ಸ್ಥಳ ಪರಿಶೀಲನೆ ಮತ್ತು ಪ್ರಮುಖ ಸಂಘ ಸಂಸ್ಥೆಗಳೊಂದಿಗೆ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೭.೩೦ಕ್ಕೆ ಗುಡ್ಡಾಪೂರದಿಂದ ಹೊರಟು, ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ. ಸೆ೨೪ ರಂದು ಬೆಳಿಗ್ಗೆ ೧೧ಗಂಟೆಗೆ ವಿಜಯಪುರದಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
