ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ನೂತನ ಇಂದಿರಾ ಕ್ಯಾಂಟಿನ್‌ಗೆ ಶಾಸಕ ರಾಜುಗೌಡ ಪಾಟೀಲ(ಕುದರಿ ಸಾಲವಾಡಗಿ) ಭೂಮಿಪೂಜೆ ನೆರವೇರಿಸಿದರು.
ಪಟ್ಟಣದ ಪಶು ಆಸ್ಪತ್ರೆಯ ಮುಂಭಾಗದಲ್ಲಿ ಶನಿವಾರ ನೂತನವಾಗಿ ಆರಂಭಗೊಳ್ಳುತ್ತಿರುವ ಇಂದಿರಾ ಕ್ಯಾಂಟಿನ್ ಭೂಮಿಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮತಕ್ಷೇತ್ರದ ಹಾಗೂ ತಾಲ್ಲೂಕಿನ ಕೇಂದ್ರ ಸ್ಥಳವಾದ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಇಂದು ಭೂಮಿ ಪೂಜೆ ಕೈಗೊಳ್ಳುವುದರ ಮೂಲಕ ಜನತೆಯ ಬಹುದಿನದ ಬೇಡಿಕೆಯನ್ನು ಇಡೇರಿಸಲಾಗುತ್ತಿದೆ. ನೂತನ ಇಂದಿರಾ ಕ್ಯಾಂಟಿನ್ ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದರು.
ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ತಾಂಬೋಳಿ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ರಮೇಶ ಮಸಬಿನಾಳ, ಸದಸ್ಯರಾದ ಕಾಸುಗೌಡ ಬಿರಾದಾರ(ಜಲಕತ್ತಿ), ಶಾಂತಯ್ಯ ಜಡಿಮಠ, ಸುಮಂಗಲಾ ಸೆಬೇನವರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ, ಮಹಿಳಾ ಪಿಎಸೈ ಪಿ.ಎಮ್.ಚೌರ, ಬಸವರಾಜ ದೇವಣಗಾಂವ, ಕಾಶೀನಾಥ ಕಡ್ಲೇವಾಡ, ಸೋಮು ದೇವೂರ, ವಿನೋದ ಚವ್ಹಾಣ, ಕಾಶೀನಾಥ ವಡ್ಡೋಡಗಿ, ವೀರೇಶ ಕುದರಿ, ಮಿಯಾಜ್ ಯಲಗಾರ, ಫಿರೋಜ್ ಮುಲ್ಲಾ, ಮುತ್ತುರಾಜ ಹಿರೇಮಠ, ಸಹಿತ ಪಟ್ಟಣ ಪಂಚಾಯಿತಿ ಸದಸ್ಯರು, ಸಿಬ್ಬಂದಿ, ಸಾರ್ವಜನಿಕರು ಇದ್ದರು.

