ಸಿಂದಗಿ: ಕಾಯಕ ಯಾವುದೇ ಇರಲಿ ಎಲ್ಲರಲ್ಲಿ ಸಮಾನತೆ ಮೂಡಿಸಬೇಕು. ಎಲ್ಲ ವಿದ್ಯಾರ್ಥಿಗಳು ಸ್ವಚ್ಛತೆಗೆ ಹೆಚ್ಚಿನ ಆಧ್ಯತೆ ನೀಡಿಬೇಕು ಎಂದು ಪ್ರಾಚಾರ್ಯ ಡಿ.ಎಂ.ಪಾಟೀಲ ಹೇಳಿದರು.
ಪಟ್ಟಣದ ಜಿಪಿ ಪೋರವಾಲ್ ಕಾಲೇಜಿನ ಆವರಣದಲ್ಲಿ ಜಿಲ್ಲಾ ನೆಹರು ಕೇಂದ್ರ, ಜಿಲ್ಲಾ ಎನ್‌ಎಸ್‌ಎಸ್ ಘಟಕ ಹಾಗೂ ಜಿ.ಪಿ.ಪೋರವಾಲ್ ಕಲಾ, ವಾಣಿಜ್ಯ ಹಾಗೂ ವ್ಹಿ.ವ್ಹಿ.ಸಾಲಿಮಠ ವಿಜ್ಞಾನ ಪದವಿ ಕಾಲೇಜಿನ ಸಹಯೋಗದಲ್ಲಿ ಸ್ವಚ್ಛತೆಯೇ ಸೇವೆ ಇದರ ಅಡಿಯಲ್ಲಿ ಸ್ವಚ್ಛತಾ ಅಭಿಯಾನ ಹೊಸ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರತಿಯೊಬ್ಬರಲ್ಲಯೂ ಸ್ವಚ್ಚತೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಈ ವೇಳೆ ಜಿಲ್ಲಾ ನೆಹರು ಯುವ ಕೇಂದ್ರದ ಅಧಿಕಾರಿ ರಾಹುಲ ಡೊಂಗ್ರೆ, ಜಿಲ್ಲಾ ಎನ್‌ಎಸ್‌ಎಸ್ ಸಂಯೋಜನಾ ಅಧಿಕಾರಿ ಡಾ.ಪ್ರಕಾಶ ರಾಠೋಡ, ಎನ್‌ಎಸ್‌ಎಸ್. ಘಟಕ ೧ರ ಡಾ.ಎಸ್.ಎಲ್.ಪಾಟೀಲ್ ಎನ್‌ಎಸ್‌ಎಸ್ ಘಟಕ ೨ರ ವಿಕ್ರಮ ಪಾಂಡೆ, ಗಬಸಾವಳಗಿಯ ಬಂಜಾರ ಯುವಕ ಸೇವಾ ಸಂಘದ ಅಧ್ಯಕ್ಷ ಸಂಜೀವ ಪವಾರ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
Related Posts
Add A Comment