ಉದಯರಶ್ಮಿ ದಿನಪತ್ರಿಕೆ
ಚಿಕ್ಕಪಡಸಲಗಿ: ಸಮೀಪದ ನಾಗನೂರ ಗ್ರಾಮದ ಶ್ರೀ ಬಸವೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಆಶ್ರಯದಲ್ಲಿ ಜರುಗಿದ ಹಿರೇಪಡಸಲಗಿ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಹಲವು ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಹಿರೇಪಡಸಲಗಿ ಸಿ.ಆರ್.ಪಿ. ಆರ್.ಎಚ್.ಮುದ್ನೂರ, ಶಿಕ್ಷಣ ಸಂಯೋಜಕರಾದ ಎಸ್.ವಿ.ವಿಜಾಪೂರ, ಮಹಾಂತೇಶ ಚವ್ಹಾಣ, ವಿಶ್ರಾಂತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಆರ್.ಎಸ್.ದೇಸಾಯಿ ಇತರರನ್ನು ಕಾರ್ಯಕ್ರಮದಲ್ಲಿ ಸಂಘಟಕರು ಶಾಲು ಹೊದಿಸಿ ಗೌರವಿಸಿದರು.

