Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರ್ಹರಿಗೆ ಪಂಚಗ್ಯಾರಂಟಿ ಯೋಜನೆಯ ಲಾಭ ದೊರಕಿಸಿ
(ರಾಜ್ಯ ) ಜಿಲ್ಲೆ

ಅರ್ಹರಿಗೆ ಪಂಚಗ್ಯಾರಂಟಿ ಯೋಜನೆಯ ಲಾಭ ದೊರಕಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸರ್ಕಾರದ ಮಹತ್ವಕಾಂಕ್ಷಿ ಪಂಚಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿಯಿಂದ ರಾಜ್ಯದ ಎಲ್ಲಾ ವರ್ಗದವರ ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸದಂತಹ ಹಲವು ರೂಪದಲ್ಲಿ ಸಹಕಾರಿಯಾಗಿದ್ದು, ಅರ್ಹರಿಗೂ ಈ ಯೋಜನೆಗಳ ಲಾಭ ದೊರಕಿಸಿ ಯಾರೂ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ ಪಾಟೀಲ ಹೇಳಿದರು.
ಅವರು ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲಾ ಪಂಚಾಯತಿಯ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಳೆದ ಬಾರಿಯ ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ ೧೬೫ ಭರವಸೆಯಲ್ಲಿ ೧೫೮ ಭರವಸೆಗಳನ್ನು ಈಡೇರಿಸಿದ್ದಲ್ಲದೇ, ಹೊಸದಾಗಿ ೩೦ ಯೋಜನೆಗಳನ್ನು ಸೇರಿಸಿ ೧೮೮ ಭರವಸೆಗಳನ್ನು ಪೂರೈಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದ ನಮ್ಮ ಸರ್ಕಾರ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ ಎಂದು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯು, ತಾಲೂಕಾ ಹಾಗೂ ಗ್ರಾಮ ಮಟ್ಟದಲ್ಲಿ ಸಭೆ ನಡೆಸಿ ಸಮರ್ಪಕ ಹಾಗೂ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವುದರ ಮೂಲಕ ಅರ್ಹರಿಗೆ ಈ ಯೋಜನೆಗಳ ಸೌಲಭ್ಯಗಳನ್ನು ತಲುಪಿಸುವಲ್ಲಿ ಕಾರ್ಯನಿರತರಾಗಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಈವರೆಗೆ ಶಕ್ತಿ ಯೋಜನೆಯಡಿ ೮,೩೩,೨೬,೦೦೦ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಪ್ರತಿ ಮನೆಗೂ ೨೦೦ ಯುನಿಟ್ ಉಚಿತ ವಿದ್ಯುತ್ ಪೂರೈಸುವ ಗೃಹಜ್ಯೋತಿ ಯೋಜನೆಗೆ ಜಿಲ್ಲೆಯಲ್ಲಿ ೪,೭೦,೯೮೫ ಫಲಾನುಭವಿಗಳು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ ೧೫,೮೨,೦೨೨ ಫಲಾನುಭವಿಗಳಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ೪,೯೯,೮೪೯ ಮನೆಯ ಯಜಮಾನಿಗೆ ಪ್ರತಿ ಮಾಹೆ ೨೦೦೦ ರೂನಂತೆ ಈವರೆಗೆ ಒಟ್ಟು ೧೦೦೧೮೧.೨೪ ಲಕ್ಷ ರೂ ಅನುದಾನವನ್ನು ಡಿಬಿಟಿ ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ೧೪,೯೮೪ ಪದವಿಧರರು, ೮೪ ಡಿಪ್ಲೊಮಾ ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್. ಎಂ. ರೇವಣ್ಣ ಮಾತನಾಡಿ, ಮಹಿಳಾ ಸಬಲೀಕರಣಕ್ಕೆ ಸರ್ಕಾರ ಒತ್ತು ನೀಡಿದ್ದು, ಶಕ್ತಿ, ಗೃಹಲಕ್ಷ್ಮಿ, ಯುವನಿಧಿ, ಗೃಹಜ್ಯೋತಿ, ಅನ್ನಭಾಗ್ಯ ಗ್ಯಾರಂಟಿ ಯೋಜನೆಗಳನ್ನು ಕಟ್ಟ ಕಡೆಯ ಜನರಿಗೂ ತಲುಪಿಸುವಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪದಾಧಿಕಾರಿಗಳು ಕಾರ್ಯನಿರ್ವಹಿಸಿ ತಮಗೆ ಒದಗಿಸಿರುವ ಜವಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಹೇಳಿದರು.
ಶಾಸಕ ವಿಠ್ಠಲ ಕಟಕದೊಂಡ ಮಾತನಾಡಿ, ಪಂಚಗ್ಯಾರಂಟಿ ಯೋಜನೆಗಳು ಎಲ್ಲರನ್ನು ಒಳಗೊಂಡ ಸಾಮೂಹಿಕ ಹಾಗೂ ಸರ್ವವ್ಯಾಪಿ ಯೋಜನೆಗಳಾಗಿದ್ದು, ಎಲ್ಲ ವರ್ಗದವರಿಗೂ ಅನುಕೂಲ ಕಲ್ಪಿಸಿವೆ ಎಂದು ಹೇಳಿದರು.
ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಿಷಿ ಆನಂದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ವೇಳೆ ಯೋಜನೆಯ ಫಲಾನುಭವಿಗಳು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಮೆಹಜನಬಿ ಹೊರ್ತಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ್ ಅಹ್ಮದ್ ಬೋರಮಣಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ವಿಜಯಕುಮಾರ ಅಜೂರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾದ್ಯಕ್ಷರು, ಸಮಿತಿಯ ಸದಸ್ಯರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜುಲೈ 19 ರಂದು ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.