ಆಲಮೇಲದಲ್ಲಿ ಡಯಾಲಿಸಿಸ್ ಕೇಂದ್ರ ಉದ್ಘಾಟಿಸಿದ ಶಾಸಕ ಮನಗೂಳಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ಬಡವರಿಗೆ ಡಯಾಲಿಸಿಸ್ ಮಾಡಿಸಿಕೊಳ್ಳುವುದು ದೊಡ್ಡ ಹೊರೆ. ಖಾಸಗಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಮಾಡಿಸಿದರೆ ಸಾವಿರಾರು ರೂಪಾಯಿಗಳು ಖರ್ಚು ಆಗುತ್ತದೆ, ಬಡವರಿಗೆ ಇಷ್ಟು ಮೊತ್ತ ನೀಡಿ ಡಯಾಲಿಸಿಸ್ ಮಾಡಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಈ ಕೇಂದ್ರ ಬಡವರಿಗೆ ಹೆಚ್ಚು ನೆರವಾಗಲಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಿಸಿಡಿಸಿ ಕಿಡ್ನಿ ಕೇರ್ ಇವರ ಸಂಯುಕ್ತ ಆಶ್ರಯದಲ್ಲಿ ನೂತನ ಡಯಾಲಿಸಿಸ್ ಕೇಂದ್ರವನ್ನು ಶಾಸಕ ಅಶೋಕ ಮನಗೂಳಿ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಬಡವರಿಗೆ ಸಹಾಯ ಮಾಡಬೇಕೆಂಬ ಉದ್ದೇಶದಿಂದ ಡಯಾಲಿಸಿಸ್ ಸೇವೆಗಳನ್ನು ಉಚಿತವಾಗಿ ನೀಡುತ್ತಿದೆ. ಆಸ್ಪತ್ರೆಯನ್ನು ಶುಚಿಯಾಗಿಡುವ ಜತೆಗೆ ರೋಗಿಗಳಿಗೆ ಡಾಕ್ಟರ್‌ಗಳು ಸ್ಪಂದಿಸಿ ಚಿಕಿತ್ಸೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೋಮಯ್ಯ ಸ್ವಾಮೀಜಿ, ಡಾ.ಸಂದೀಪ ಜೆ. ಪಾಟೀಲ, ಆಲಮೇಲ ಪ.ಪಂ ಅಧ್ಯಕ್ಷ ಸಾಧಿಕ ಸುಂಬಡ,ಸಿಂದಗಿ ತಾಲೂಕಾ ಆರೋಗ್ಯಧಿಕಾರಿ
ಡಾ.ಎ.ಎ.ಮಾಗಿ, ಆಲಮೇಲ ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಮಂಜುನಾಥ ಆಕಾಶಿ,ಚಿಕ್ಕ ಮಕ್ಕಳ ತಜ್ಞ ಡಾ.ರಾಜೇಶ ಪಾಟೀಲ, ನೇತ್ರಾಧಿಕಾರಿ ಸುರೇಶ ಮಹೇಂದ್ರಕರ,ಅಶೋಕ ತೆಲ್ಲೂರ,ಪ.ಪಂ ಸದಸ್ಯ ರಾಹುಲ ಎಂಟಮಾನ, ಗುತ್ತಿಗೆದಾರ ವೀರಭದ್ರ ಕತ್ತಿ, ನಾಗರಿಕ ವೇದಿಕೆ ಅಧ್ಯಕ್ಷ ರಮೇಶ ಭಂಟನೂರ, ಭೀಮು ಬಮ್ಮನಹಳ್ಳಿ, ಬಾಬು ಕೋತ್ತಂಬರಿ, ದಯಾನಂದ ನಾರಾಯಣಕರ, ಸಂತೋಷ ಜರಕರ, ಶಶಿ ಗಣಿಯಾರ, ಪುಂಡಲೀಕ ದೊಡ್ಡಮನಿ ಸೇರಿದಂತೆ ಸಮುದಾಯ ಆರೋಗ್ಯ ಕೇಂದ್ರ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಮತ್ತು ಪಟ್ಟಣದ ಮುಖಂಡರಿದ್ದರು.

” ರೋಗಿಗೆ ಕಿಡ್ನಿ ವೈಫಲ್ಯವಾದಾಗ ಡಯಾಲಿಸಿಸ್ ಒಂದೇ ಮಾರ್ಗವಾಗಿದೆ, ಜನ ಆರೋಗ್ಯಯುತವಾಗಿರಲಿ ಎಂಬ ಉದ್ದೇಶದಿಂದ ಸರ್ಕಾರವು ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ ಜನ ಸಾಮಾನ್ಯರು ಸಹಕಾರ ಮಾಡಿದರೇ ಮಾತ್ರ ನಾವು ಉತ್ತಮ ಚಿಕಿತ್ಸೆ ನೀಡಲು ಸಾಧ್ಯ.”
– ಡಾ.ಸಂಪತ್ ಗುಣಾರಿ
ಡಿಹೆಚ್ಓ, ವಿಜಯಪುರ

