ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯಲ್ಲಿ ೧೩ ತಾಲೂಕುಗಳಲ್ಲಿ ರೈತರು ಪ್ರತಿನಿತ್ಯ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇವುಗಳಿಗೆ ಸಂಬಂಧಿಸಿದ ಅಧಿಕಾರಿಗಳನ್ನು ಕರೆಯಿಸಿ ಶೀಘ್ರದಲ್ಲಿ ಬಗೆಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು, ೨೦೨೩-೨೪ ನೇ ಫಸಲ್ ಭೀಮಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿರುವ ಕುರಿತು ೩ ತಿಂಗಳಿನಿಂದ ನಿರಂತರ ಹೋರಾಟ ಮಾಡಿದರೂ ಸಹ ಜಿಲ್ಲಾಡಳಿತ ಮಾಹಿತಿ ನೀಡುತ್ತಿಲ್ಲ, ಜಿಲ್ಲಾಧ್ಯಂತ ನಡೆಯುತ್ತಿರುವ ಎಲ್ಲ ನೀರಾವರಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ವಿವಿಧ ಏತನೀರಾವರಿ ಯೋಜನೆಗಳು ಸಂಪೂರ್ಣವಾಗಿ ಮುಗಿಸಿ ಭೂಸ್ವಾಧಿನದ ಹಣವನ್ನು ರೈತರಿಗೆ ಶೀಘ್ರದಲ್ಲಿ ಕೊಡಿಸುವುದು, ವಿದ್ಯುತ್ ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆದರು.
ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ತಿಕೊಟಾ ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ಮಹಾದೇವ ಕದಂ, ಮಹಾಂತೇಶ ಮಮದಾಪುರ, ಸಂಗಪ್ಪ ಟಕ್ಕೆ, ತಿಪ್ಪರಾಯ ಭೈರೋಡಗಿ, ವಿಠ್ಠಲ ಬಿರಾದಾರ, ಸೋಮನಗೌಡ ಪಾಟೀಲ, ಪ್ರಲ್ಹಾದ ನಾಗರಾಳ, ಸಿದ್ದಪ್ಪ ಕೊಟ್ಟಲಗಿ, ಹೊನ್ನಕೆರಪ್ಪ ತೇಲಗಿ, ಸದಾಶಿವ ಬರಟಗಿ ಸೇರಿದಂತೆ ಅನೇಕರು ಇದ್ದರು.

