ಉದಯರಶ್ಮಿ ದಿನಪತ್ರಿಕೆ
ಢವಳಗಿ: ತಾಳಿಕೋಟಿ ತಾಲೂಕಿನ ಮೈಲೇಶ್ವರ ಗ್ರಾಮದ ಬ್ರೀಲಿಯಂಟ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಡ ಶಾಲೆಯಲ್ಲಿ ಸೆ.20 ಶುಕ್ರವಾರದಂದು ನಡೆದ ತಾಲ್ಲೂಕು ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಬಸರಕೋಡ ಗ್ರಾಮದ ಮಾತೋಶ್ರೀ ಶಿವಲಿಂಗಮ್ಮ ಬ ನಾಡಗೌಡರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು.ಸವಿತಾ ಟಕ್ಕಳಕಿ 100 ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.

