Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಕ್ರೀಡಾಸಕ್ತಿ ಬೆಳೆಸಿ :ಎಡಿಸಿ ಗೆಣ್ಣೂರ
(ರಾಜ್ಯ ) ಜಿಲ್ಲೆ

ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಕ್ರೀಡಾಸಕ್ತಿ ಬೆಳೆಸಿ :ಎಡಿಸಿ ಗೆಣ್ಣೂರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಕ್ರೀಡಾಸಕ್ತಿಯನ್ನು ಹೊಂದುವಂತೆ ಪ್ರೇರೆಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಹೇಳಿದರು.
ಮಂಗಳವಾರ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ತಾಳಿಕೋಟೆಯಲ್ಲಿ ೧೦-೧೧-೨೦೨೪ರಿಂದ ನಡೆಯುವ ರಾಜ್ಯ ಮಟ್ಟದ ವ್ಹಾಲಿಬಾಲ್ ಕ್ರಿಡಾಕೂಟದ ಆಯೋಜನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾ ಜಗತ್ತಿನಲ್ಲಿ ಕ್ರೀಡೆಗಳಲ್ಲಿ ಬಹಳಷ್ಟು ಜನರು ಆಸಕ್ತಿ ತೋರಬೇಕು. ಕ್ರೀಡಾ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಬೇಕು. ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಪಾಲಕರು, ಶಿಕ್ಷಕರು ಮಕ್ಕಳಲ್ಲಿರುವ ಕ್ರೀಡಾಸಕ್ತಿಯನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವಬೇಕು. ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರ ಮಟ್ಟಗಳಲ್ಲಿ ಭಾಗವಹಿಸಿ ದೇಶದ ಕೀರ್ತಿ ತರುವಂತಾಗಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ, ದೈಹಿಕ ಹಾಗೂ ಆರೋಗ್ಯ ಸದೃಢತೆ ಹೋಂದಬಹುದಾಗಿದೆ ಎಂದು ಅವರು ಹೇಳಿದರು.
ರಾಜ್ಯ ಮಟ್ಟದ ವ್ಹಾಲಿಬಾಲ್ ಕ್ರೀಡಾಕೂಟವನ್ನು ನಮ್ಮ ಜಿಲ್ಲೆಯಲ್ಲಿ ಆಯೋಜಿಸುತ್ತಿರುವುದು ಸಂತಸದ ವಿಷಯ. ಈ ಕ್ರೀಡಾಕೂಟದಲ್ಲಿ ಆಗಮಿಸುವ ಕ್ರೀಡಾಪಟುಗಳಿಗೆ ವಸತಿ ಸೇರಿದಂತೆ ಇತರ ಅವಶ್ಯಕ ಸೌಲಭ್ಯಗಳನ್ನು ಒದಗಿಸಬೇಕು. ಆರೋಗ್ಯ ಮತ್ತು ಭದ್ರತಾ ವ್ಯವಸ್ಥೆಗೆ ಕ್ರಮವಹಿಸಬೇಕು. ಕ್ರೀಡಾಕೂಟ ಯಶಸ್ವಿಗೆ ತಾವೆಲ್ಲರೂ ಕೂಡ ಸಹಕರಿಸುವಂತೆ ತಿಳಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಕೆ ಹೊಸಮನಿ ಪ್ರಾಸ್ತಾವಿಕವಾಗಿ ಮಾತನಾಡಿ ರಾಜ್ಯ ಮಟ್ಟದ ವ್ಹಾಲಿಬಾಲ್ ಕ್ರೀಡಾಕೂಟವನ್ನು ಜಿಲ್ಲೆಯ ತಾಳಿಕೋಟೆಯ ಶ್ರೀ ಸಂಗನಬಸವ ಶಿಕ್ಷಣ ಸಂಸ್ಥೆಯ ಎಚ್.ಎಸ್ ಪಾಟೀಲ್ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ದಿನಾಂಕ ೯-೧೧-೨೦೨೪ರಂದು ಸಂಜೆ ೫ ಗಂಟೆಗೆ ಕ್ರೀಡಾಕೂಟ ಉದ್ಘಾಟನೆಯಾಗಲಿದ್ದು ದಿನಾಂಕ: ೧೦-೧೧-೨೦೨೪ ಹಾಗೂ ೧೧-೧೧-೨೦೨೪ರಂದು ಕ್ರೀಡಾಕೂಟ ಆಯೋಜಿಸಲಾಗಿದೆ ಎಂದರು.
ಒಟ್ಟು ೬೦ ತಂಡಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದು, ೩೦ ಪುರುಷ ಹಾಗೂ ೩೦ ಮಹಿಳಾ ತಂಡಗಳು ಭಾಗವಹಿಸಲಿದ್ದು ಒಟ್ಟು ೯೦೦ ಕ್ರೀಡಾಪಟುಗಳು ಭಾಗಹಿಸಲಿದ್ದಾರೆ. ಈಗಾಗಲೇ ವಿವಿಧ ಸಮಿತಿಗಳನ್ನು ರಚಿಸಿ, ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಕೂಟ ಆಯೋಜಿಸಲು ಸೂಚಿಸಲಾಗಿದೆ ಕಾರ್ಯಕ್ರಮ ಅಚ್ಚು ಕಟ್ಟಾಗಿ ನಿರ್ವಹಿಸಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪದವಿ ಶಿಕ್ಷಣದ ಮಹಾಮಂಡಲದ ಅದ್ಯಕ್ಷರಾದ ಎಸ್.ಎಸ್.ಗೌರಿ, ಉಪನ್ಯಾಸಕ ಸಂಘದ ಅಧ್ಯಕ್ಷರಾದ ಎಂ.ಡಿ. ಹೆಬ್ಬಿ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ. ನಾಟೀಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಾಖಾಧಿಕಾರಿ ಬಿ.ಟಿ. ಗೊಂಗಡಿ, ತಾಳಿಕೋಟೆಯ ಸಂಗನಬಸವ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್. ಪಾಟೀಲ ಸೇರಿದಂತೆ, ಜಿಲ್ಲಾ ಪ್ರಾಚಾರ್ಯರ ಮಹಾಮಂಡಲದ ಪದಾಧಿಕಾರಿಗಳು, ಕರ್ನಾಟಕ ರಾಜ್ಯ ಪದವಿ ಪೂರ್ವ ಉಪನ್ಯಾಸಕರ ಸಂಘದ ಪದಾಧಿಕಾರಿಗಳು, ದೈಹಿಕ ಶಿಕ್ಷಣ ಉಪನ್ಯಾಸಕರು ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.