ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ಇವರ ಸಹಯೋಗದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪೂರದ ಶ್ರೀ ದಾನಮ್ಮದೇವಿ ದೇವಸ್ಥಾನದಲ್ಲಿ ಸೆಪ್ಟೆಂಬರ್ ೩೦ರಂದು ನಡೆಯುವ ಕರ್ನಾಟಕ ಸುವರ್ಣ ಸಂಭ್ರಮ-೫೦ರ ಆಚರಣೆ ಹಾಗೂ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಈ ಕಾರ್ಯಕ್ರಮವನ್ನು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ ವಿಭಾಗದ ತಾಲೂಕಾ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಸಾರಿಗೆ ಬಸ್‌ಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಕಕರಸಾ ನಿಗಮ ವಿಜಯಪುರದ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
