Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಡಾ ಕೇಸ್ ಹೈಕೋರ್ಟ್ ತೀರ್ಪು: ಸಿಎಂ ಗೆ ತನಿಖೆ ಬಿಸಿ!
(ರಾಜ್ಯ ) ಜಿಲ್ಲೆ

ಮುಡಾ ಕೇಸ್ ಹೈಕೋರ್ಟ್ ತೀರ್ಪು: ಸಿಎಂ ಗೆ ತನಿಖೆ ಬಿಸಿ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾನೂನು ತಜ್ಞರ ಜತೆ ಚರ್ಚಿಸಿ ಮುಂದಿನ ಹೋರಾಟ | ಸತ್ಯಕ್ಕೆ ಜಯ | ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಲು ಹಿಂಜರಿಯುವುದಿಲ್ಲ. ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕಾನೂನು ಹೋರಾಟಗಳ ಕುರಿತು ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧದ ತನಿಖೆಗೆ ರಾಜ್ಯಪಾಲ ತಾವರ್‌ಚಂದ್‌ ಗೆಹ್ಲೋಟ್‌ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪು ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದರಾಮಯ್ಯ, ಸತ್ಯಕ್ಕೆ ಜಯ ಸಿಗಲಿದೆ. ತನಿಖೆಯನ್ನು ಎದುರಿಸಲು ನಾನು ಹಿಂಜರಿಯುವುದಿಲ್ಲ, ಕಾನೂನಿನಡಿಯಲ್ಲಿ ಅಂತಹ ತನಿಖೆಗೆ ಅನುಮತಿ ಇದೆಯೇ ಅಥವಾ ಇಲ್ಲವೇ ಎಂಬುದನ್ನು ನಾನು ತಜ್ಞರನ್ನು ಸಂಪರ್ಕಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಕಾನೂನು ಮತ್ತು ಸಂವಿಧಾನದಲ್ಲಿ ನಂಬಿಕೆ ಇದೆ ಎಂದು ಹೇಳಿದ ಅವರು, ಈ ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ ತನಗೆ ತೊಂದರೆ ನೀಡುತ್ತಿವೆ ಎಂದು ಆರೋಪಿಸಿದ ಸಿದ್ದರಾಮಯ್ಯ, ಬಿಜೆಪಿ ಮತ್ತು ಜೆಡಿಎಸ್‌ನ ಈ ಸೇಡಿನ ರಾಜಕಾರಣದ ವಿರುದ್ಧ ನಮ್ಮ ನ್ಯಾಯಾಂಗ ಹೋರಾಟ ಮುಂದುವರಿಯುತ್ತದೆ. ನಾನು ತೀರ್ಪಿನ ಕಾಪಿಯನ್ನು ಸಂಪೂರ್ಣವಾಗಿ ಓದಿಲ್ಲ. ಅದನ್ನು ಓದಿದ ನಂತರ ಮತ್ತೊಮ್ಮೆ ಮಾತನಾಡುತ್ತೇನೆ ಎಂದರು.
ಮುಂದಿನ ದಿನಗಳಲ್ಲಿ ಸತ್ಯ ಹೊರಬಂದು 17ಎ ಅಡಿ ನೀಡಿರುವ ತನಿಖೆ ರದ್ದಾಗಲಿದೆ ಎಂಬ ದೃಢ ವಿಶ್ವಾಸ ನನಗಿದೆ. ಈ ರಾಜಕೀಯ ಹೋರಾಟದಲ್ಲಿ ರಾಜ್ಯದ ಜನ ನನ್ನ ಹಿಂದೆ ಇದ್ದಾರೆ. ಅವರ ಆಶೀರ್ವಾದವೇ ನನಗೆ ಶ್ರೀರಕ್ಷೆ. ಕಾನೂನು ಮತ್ತು ಸಂವಿಧಾನದಲ್ಲಿ ನನಗೆ ನಂಬಿಕೆ ಇದೆ. ಈ ಹೋರಾಟದಲ್ಲಿ ಅಂತಿಮವಾಗಿ ಸತ್ಯಕ್ಕೆ ಜಯ ಸಿಗಲಿದೆ ಎಂದು ಸಿಎಂ ಹೇಳಿದರು.

ಬಿಜೆಪಿ-ಜೆಡಿಎಸ್ ಸೇಡಿನ ರಾಜಕೀಯದ ವಿರುದ್ಧ ಹೋರಾಟ :ಸಿಎಂ

ಇದು ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದ ಸೇಡಿನ ರಾಜಕೀಯದ ವಿರುದ್ಧದ ಹೋರಾಟ. ಬಿಜೆಪಿ, ಜೆಡಿಎಸ್ ನ ಈ ಸೇಡಿನ ರಾಜಕೀಯದ ವಿರುದ್ಧ ನಮ್ಮ ನ್ಯಾಯಾಂಗದ ಹೋರಾಟ ಮುಂದುವರಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನ್ಯಾಯಾಲಯದ ಮೇಲೆ ನನಗೆ ನಂಬಿಕೆ ಇದೆ. ನಮ್ಮ ಪಕ್ಷದ ಎಲ್ಲ ಶಾಸಕರು, ನಾಯಕರು ಮತ್ತು ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಹೈಕಮಾಂಡ್ ನನ್ನ ಪರವಾಗಿ ಭದ್ರವಾಗಿ ನಿಂತಿದ್ದು, ಕಾನೂನಿನ ಹೋರಾಟ ಮುಂದುವರಿಸುವಂತೆ ಉತ್ತೇಜನ ನೀಡಿದ್ದಾರೆ.
ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ. ನನ್ನ 40 ವರ್ಷಗಳ ರಾಜಕೀಯ ಜೀವನದುದ್ದಕ್ಕೂ ಇಂತಹ ಸೇಡು, ಸಂಚಿನ ರಾಜಕೀಯವನ್ನು ಎದುರಿಸಿದ್ದೇನೆ ಮತ್ತು ರಾಜ್ಯದ ಜನರ ಆಶೀರ್ವಾದ, ಹಾರೈಕೆಯ ಬಲದಿಂದ ಗೆಲ್ಲುತ್ತಾ ಬಂದಿದ್ದೇನೆ. ಈ ಹೋರಾಟವನ್ನು ಜನತೆಯ ಆಶೀರ್ವಾದದ ಬಲದಿಂದ ಗೆಲ್ಲುತ್ತೇನೆ ಎಂಬ ವಿಶ್ವಾಸ ಇದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದಿದ್ದಾರೆ..

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.