ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪ್ರಜಾಪ್ರಭುತ್ವ ಮಾದರಿ ದೇಶದಲ್ಲಿರುವ ಕಾರ್ಮಿಕರ ಹಕ್ಕುಗಳಾದ ಸಂಘಟನೆಯ ಹಕ್ಕು, ಮುಷ್ಕರದ ಹಕ್ಕು, ಅಗತ್ಯ ಕನಿಷ್ಟ ವೇತನ, ಸಮಾಜಿಕ ಮತ್ತು ಆರ್ಥಿಕ ಭದ್ರತೆ ಹಕ್ಕನ್ನು ಉಳಿಸಲು ದೇಶದ್ಯಾಂತ ಆಲ್ ಇಂಡಿಯಾ ಯನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ತಾಲೂಕು ಘಟಕ ಸಿಂದಗಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಂಟಿ ಜಿಲ್ಲಾ ಕಾರ್ಯದರ್ಶಿ ಮಹಾದೇವಿ ಧರ್ಮಶೆಟ್ಟಿ ಹೇಳಿದರು.
ಪಟ್ಟಣದ ಆಡಳಿತ ಸೌಧದ ಮುಂಭಾಗದಲ್ಲಿ ಎಐಯುಟಿಸಿ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಬಿಜೆಪಿ ನೇತೃತ್ವದ ಎನಡಿಎ ಸರಕಾರ ತಂದಿರುವ ೪ ಕಾರ್ಮಿಕ ವಿರೋಧಿ ನೀತಿ ಹಿಂಪಡೆಯುವಂತೆ ಆಗ್ರಹಿಸಿ ತಾಲೂಕು ದಂಡಾಧಿಕಾರಿಗಳ ಮೂಲಕ ಪಿಎಂ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಈ ದೇಶದ ಶ್ರೀಮಂತರಿಗೆ ಅನುಕೂಲವಾಗುವ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರಕಾರ ಕಾರ್ಮಿಕ ವರ್ಗಕ್ಕೆ ದ್ರೋಹ ಬಗೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ರೂಪಾ ಆಲಮೇಲ, ಪಾರ್ವತಿ ಕಟ್ಟಿಮನಿ, ಶಿವಮ್ಮ ಬೂದಿಹಾಳ, ನಾಗಮ್ಮ, ರಜನಿ ಸೇರಿದಂತೆ ಆಲ್ ಇಂಡಿಯಾ ಯನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ ಪದಾಧಿಕಾರಿಗಳು, ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ವಿವಿಧ ಸಂಘಟನೆ ಸದಸ್ಯರು ಇದ್ದರು.

