ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗುರುವಾರ ಜೆನಿತ್- 2024 ವಾರ್ಷಿಕ ಕ್ರೀಡಾ ದಿನ ಆಚರಿಸಲಾಯಿತು.
ಶ್ರೀ ಬಿ.ಎಂ. ಪಾಟೀಲ್ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಗ್ರಂಥಾಲಯ ಕಟ್ಟಡದ ಸಭಾಂಗಣದಲಿ ಕ್ರೀಡಾ ವಿಭಾಗ ಆಯೋಜಿಸಿದ್ದ ಈ ಕಾರ್ಯಕ್ರಮವನ್ನು ಖ್ಯಾತ ಟ್ರ‍್ಯಾಕ್ ಸೈಕ್ಲಿಸ್ಟ್ ವೆಂಕಪ್ಪ ಕೆಂಗಲಗುತ್ತಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ವಿವಿ ಕುಲಪತಿ ಡಾ. ಆರ್.ಎಸ್.ಮುಧೋಳ, ಕ್ರೀಡಾ ಸಮಿತಿಯ ಉಪಾಧ್ಯಕ್ಷ ಡಾ.ಗಿರೀಶ್ ಕುಳ್ಳೊಳ್ಳಿ, ವೈದ್ಯಕೀಯ ವಿಭಾಗದ ಡೀನ್ ಡಾ.ತೇಜಸ್ವಿನಿ ವಲ್ಲಭ, ಉಪಪ್ರಾಚಾರ್ಯ ಡಾ. ಎಂ.ಬಿ.ಪಾಟೀಲ, ಡಾ.ಸುಮಂಗಲಾ ಪಾಟೀಲ, ಬಿ.ಎಲ್.ಡಿ.ಇ. ಸಂಘದ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ಕ್ರೀಡಾ ವಿಭಾಗದ ಸಹಾಯಕ ನಿರ್ದೇಶಕಿ ಡಾ. ಮಹಾದೇವಿ ವಾಲಿ,ವಿದ್ಯಾರ್ಥಿ ಪ್ರತಿನಿಧಿಗಳಾದ ಡಾ.ರುತುಜಾ ನಿಕಮ್, ಡಾ. ಎಸ್. ರಾಹುಲ, ಬೋಧಕ ಹಾಗೂ ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸುಮಾರು 500 ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸಿದ್ದರು.

