Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹಲಕ್ಷ್ಮಿ ಯೋಜನೆ ಹಣ ಹಲವೆಡೆ ಜಮೆಯಾಗುತ್ತಿಲ್ಲ :ಕಣಕಾಲ
(ರಾಜ್ಯ ) ಜಿಲ್ಲೆ

ಗೃಹಲಕ್ಷ್ಮಿ ಯೋಜನೆ ಹಣ ಹಲವೆಡೆ ಜಮೆಯಾಗುತ್ತಿಲ್ಲ :ಕಣಕಾಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿಯಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಥಮ ಸಭೆ ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಮಂಗಳವಾರ ಜರುಗಿತು.
ಸಭೆಯಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ, ಯುವನಿಧಿ ಯೋಜನೆಗಳ ಕುರಿತು ಚರ್ಚೆ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಹಾಗೂ ಉಪಾಧ್ಯಕ್ಷ ರೆಹಮಾನ ಕಣಕಾಲ ಮಾತನಾಡಿ, ಹಲವಾರು ಕಡೆ ಗೃಹಲಕ್ಷ್ಮಿ ಯೋಜನೆಯ ಹಣ ಸೂಕ್ತ ರೀತಿಯಲ್ಲಿ ಜಮೆಯಾಗುತ್ತಿಲ್ಲ. ಶಕ್ತಿ ಯೋಜನೆ ಅಡಿಯಲ್ಲಿ ಹೆಚ್ಚುವರಿ ಬಸ್ಸುಗಳನ್ನು ಸಿಂದಗಿ ದೇವರಹಿಪ್ಪರಗಿ ವಿಜಯಪುರ ಮಾರ್ಗಗಳ ಮಧ್ಯ ಓಡಿಸಬೇಕು. ಗ್ರಾಮೀಣ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು, ಅನ್ನಭಾಗ್ಯ ಯೋಜನೆಯಡಿ ಪಡಿತರ ವಿತರಣೆ ಮಾಡುವವರು ಹಣ ಪಡೆದು ಪಾವತಿ ಮಾಡುತ್ತಿದ್ದಾರೆ ಇದನ್ನು ಕೂಡಲೇ ನಿಲ್ಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಪಡಿತರ ಚೀಟಿ ಬಯೋಮೆಟ್ರಿಕ್ ಮಾಡಿಕೊಂಡು ನಂತರ ಪಡಿತರ ವಿತರಣೆ ಮಾಡುತ್ತಿದ್ದಾರೆ. ಈ ರೀತಿಯಾಗದಂತೆ ನೋಡಿಕೊಳ್ಳಬೇಕು. ಯುವ ನಿಧಿ ಯೋಜನೆಗೆ ಸಂಬಂಧಿಸಿದಂತೆ ಅರ್ಹ ನಿರುದ್ಯೋಗಿ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದು ತಿಳಿಸಿದರು.
ನರೇಗಾ ಯೋಜನೆ ಸಹಾಯಕ ನಿರ್ದೇಶಕ ಶಾಂತಗೌಡ ನ್ಯಾಮಣ್ಣವರ, ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್ ಪವಾರ, ಹೆಸ್ಕಾಂ ಶಾಖಾಧಿಕಾರಿ ಯು.ಎಲ್.ಪಟ್ಟಣ, ಆಹಾರ ನಿರೀಕ್ಷಕ ದಳವಾಯಿ, ಗ್ಯಾರಂಟಿ ಯೋಜನೆ ಉಪಾಧ್ಯಕ್ಷ ಪರಶುರಾಮ ಉತ್ನಾಳ, ಸದಸ್ಯರಾದ ಬೀರು ಹಳ್ಳಿ, ಪ್ರಕಾಶ ಮಣೂರ, ಮಹಮ್ಮದಶಫೀಕ ಸಿಪಾಯಿ, ಶೋಭಾ ಭಾವಿಕಟ್ಟಿ, ಶಾಕೀರಾ ಹೆಬ್ಬಾಳ, ರವಿಕಾಂತ ನಾಯ್ಕೋಡಿ, ಸದಾಶಿವ ಕಡ್ಲೆವಾಡ, ಭೈರೆಡ್ಡಿ ಹದ್ನೂರ, ಕುಮಾರ ರಾಠೋಡ, ಮಾಂತೇಶ ಚಲವಾದಿ ಮಡಿವಾಳಪ್ಪ ಹಡಪದ, ಜಿ.ಎಸ್.ರೋಡಗಿ, ಎಸ್.ಎಸ್.ಆಲಮೇಲ, ಎ.ಪಿ.ಕಂಬಾರ, ಜಿ.ವಿ.ಸಂಪನ್ನವರ, ಎಸ್.ವಿ.ಹತ್ತರಗಿ ಸೇರಿದಂತೆ ವಿವಿಧ ಇಲಾಖೆಯ ಮುಖ್ಯಸ್ಥರು, ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ

ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ

ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ

ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವದ ಆಧ್ಯಾತ್ಮಿಕ ಸಂಸತ್ತಿನ ಶಿಲ್ಪಿ ಬಸವಣ್ಣ :ಎಸಿ ಚಿದಾನಂದ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ವಿಶ್ವ ಭ್ರಾತೃತ್ವ ಸಾರಿದ ಶರಣ :ಮೌಲಾಲಿ
    In (ರಾಜ್ಯ ) ಜಿಲ್ಲೆ
  • ವಚನಗಳ ಮೂಲಕ ಸಮಾನತೆಯ ಸಂದೇಶ ಸಾರಿದ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರದಲ್ಲಿ ವಿಜ್ರಂಬಣೆಯ ಬಸವೇಶ್ವರ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ಬಸವಣ್ಣನವರ ಚಿಂತನೆಗಳು ಎಂದೆಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ಬಸವ ತತ್ವ ಸಕಲ ಶರಣರ ವಚನಗಳ ಸಾರ :ಕುಲಕರ್ಣಿ
    In (ರಾಜ್ಯ ) ಜಿಲ್ಲೆ
  • ಅಧಿಕಾರ ಯಾವಾಗಲೂ ಜನಪರವಾಗಿರಬೇಕು :ಶಾಸಕಮನಗೂಳಿ
    In (ರಾಜ್ಯ ) ಜಿಲ್ಲೆ
  • ಬಸವಣ್ಣರ ಅನುಭವ ಮಂಟಪ ಪರಿಕಲ್ಪನೆಗಳೇ ಸಂವಿಧಾನಕ್ಕೆ ತಳಹದಿ
    In (ರಾಜ್ಯ ) ಜಿಲ್ಲೆ
  • ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಚಿಂತಕ ಬಸವಣ್ಣ
    In (ರಾಜ್ಯ ) ಜಿಲ್ಲೆ
  • ಬಸವಣ್ಣ ೧೨ನೇ ಶತಮಾನದ ಕ್ರಾಂತಿಯೋಗಿ :ಬಸವರೆಡ್ಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.