Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜಕಾಲುವೆ ಅತಿಕ್ರಮಣ ತೆರವಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ
(ರಾಜ್ಯ ) ಜಿಲ್ಲೆ

ರಾಜಕಾಲುವೆ ಅತಿಕ್ರಮಣ ತೆರವಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಮಳೆನೀರು ನಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಕಸ, ತಾಜ್ಯಗಳನ್ನು ತೆಗೆದು ರಾಜಕಾಲುವೆಗಳನ್ನು ಸ್ವಚ್ಚವಾಗಿಡಬೇಕು. ಒತ್ತುವರಿಯಾಗಿರುವ ರಾಜಕಾಲುವೆ, ಅತಿಕ್ರಮಣವನ್ನು ೧೫ ದಿನಗಳ ಕಾಲಮಿತಿಯಲ್ಲಿ ತೆರವುಗೊಳಿಸಲು ಕ್ರಮವಹಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಆದ ಜಿಲ್ಲಾ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚಿಸಿದರು.
ಬುಧವಾರ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಹಾನಿ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರನ್ನೊಳಗೊಂಡ ಕಾರ್ಯಪಡೆ ರಚಿಸಿಕೊಂಡು ಆಗಾಗ ಸಭೆ ನಡೆಸಬೇಕು ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯು ರಸ್ತೆ ನಿರ್ಮಾಣ ಸಂದರ್ಭದಲ್ಲಿ ಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು.
ಮಳೆಯಿಂದ ಹಾನಿಯಾದ ರಸ್ತೆ, ವಿದ್ಯುತ್ ಕಂಬ ಮಾಹಿತಿ ಸಂಗ್ರಹಿಸುವಂತೆಯೂ, ಮಳೆ ಸಂದರ್ಭದಲ್ಲಿ ಯಾವುದೇ ಅಪಾಯಗಳು ಉಂಟಾಗದಂತೆ ವಿದ್ಯುತ್ ಕಡಿತಗೊಳಿಸಬೇಕು ಎಂದು ಹೇಳಿದರು.
ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕರ್ತವ್ಯ ನಿರ್ವಹಿಸುವ ಬಗ್ಗೆ, ಸಕಾಲಕ್ಕೆ ಹಾಜರಾಗುವ ಬಗ್ಗೆ ಜಿಲ್ಲಾ ಪಂಚಾಯತಿಯ ಕಾರ್ಯನಿರ್ವಾಹಕಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳು ಕಾಲಕಾಲಕ್ಕೆ ಅನೀರಿಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಮಳೆಯಿಂದ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ ಅವರು, ಎರಡು ವಾರಗಳಲ್ಲಿ ಮತ್ತೊಮ್ಮೆ ಸಭೆ ನಡೆಸಲಾಗುವುದು. ಯಾವುದೇ ನೆಪ ಹೇಳದೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಡೋಣಿ ನದಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಡೋಣಿ ನದಿಯಿಂದ ಉಂಟಾಗುವ ಪ್ರವಾಹವನ್ನು ತಡೆಗಟ್ಟಲು ನದಿಯ ಇಕ್ಕೆಲಗಳಲ್ಲಿ ಬೆಳೆದಿರುವ ಜಾಲಿಕಂಟಿಗಳನ್ನು ಸ್ವಚ್ಛಗೊಳಿಸುವ ಕಾಮಗಾರಿ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ್ವರ ಬಬಲೇಶ್ವರ ಮೇಯರ್ ಮಹೇಜನಬಿ ಹೊರ್ತಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್, ಉಪ ಮೇಯರ್ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ. ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠ್ಠಾಧಿಕಾರಿ ಋಷಿಕೇಶ ಸೋನಾವಣೆ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮನೆ-ಬೆಳೆಹಾನಿ ಸಮೀಕ್ಷೆಗೆ ಸೂಚನೆ
ಜಿಲ್ಲೆಯಲ್ಲಿ ದಾಖಲೆಯ ಮಳೆಯಿಂದಾಗಿರುವ ಹಾನಿಯ ಕುರಿತು ತುರ್ತಾಗಿ ಸಮೀಕ್ಷೆ ಕೈಗೊಂಡು ಮನೆ-ಬೆಳೆಹಾನಿ ಸಮೀಕ್ಷೆ ಕೈಗೊಳ್ಳಬೇಕು. ನಿಖರ ಮಾಹಿತಿ ಸಿದ್ಧಪಡಿಸುವಂತೆಯೂ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿರುವ ಹಾನಿಯ ಬಗ್ಗೆ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 16, 2026
    In ಆರೋಗ್ಯ
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.