ಉದಯರಶ್ಮಿ ದಿನಪತ್ರಿಕೆ
ಚಡಚಣ: ಸಮೀಪದ ರೇವತಗಾಂವ ಗ್ರಾಮದ ಮಲ್ಲಿಕಾರ್ಜುನ ಕಲ್ಲಪ್ಪ ಮಾನೆ ಅವರು ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ)ದ ಮತಿಯಿಂದ ನೀಡಲಾಗುವ ರಾಜ್ಯಮಟ್ಟದ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸದ್ಯ ಚಡಚಣ ಮಟ್ಟಣದ ಎಂ.ಇ.ಎಸ್ ಶಿಕ್ಷಣ ಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರಿಗೆ ಶನಿವಾರದಂದು ಬೆಂಗಳೂರಿನ ಜ್ಞಾನ ಭಾರತಿ ಆವರಣದ ಪ್ರೊ.ಕೆ ವೆಂಕಟಗಿರಿ ಗೌಡ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುವುದೆಂದು ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ(ರಿ)ದ ರಾಜ್ಯಾಧ್ಯಕ್ಷ ಸುರೇಶ ಗೊಲ್ಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

