Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾರ್ಯಕ್ರಮ ಯಶಸ್ಸಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ
(ರಾಜ್ಯ ) ಜಿಲ್ಲೆ

ಕಾರ್ಯಕ್ರಮ ಯಶಸ್ಸಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸೆ.೩೦ರಂದು ಗುಡ್ಡಾಪುರದಲ್ಲಿ ನಡೆವ ಕರ್ನಾಟಕ ಸಂಭ್ರಮ-೫೦ ಕುರಿತು ಅಧಿಕಾರಿಗಳಿಗೆ ಡಿಸಿ ಟಿ.ಭೂಬಾಲನ್ ಕರೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಸಂಭ್ರಮ-೫೦ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆ.೩೦ ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು, ಗಣ್ಯಾತಿಗಣ್ಯರು ಆಗಮಿಸುವರು. ಶಿಷ್ಟಾಚಾರದಂತೆ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯುತ್ತಿದ್ದು, ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸುವ ದೃಷ್ಟಿಯಿಂದ ಈಗಾಗಲೇ ಜಿಲ್ಲಾಡಳಿತದಿಂದ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಹಲವು ಸಮಿತಿಗಳನ್ನು ರಚಿಸಿ, ಅಧಿಕಾರಿಗಳನ್ನು ನೇಮಿಸಿ, ಜವಾಬ್ದಾರಿ ವಹಿಸಲಾಗಿದೆ. ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಿ, ವಹಿಸಿದ ಕಾರ್ಯಗಳನ್ನು ಯಾವುದೇ ಸಮಸ್ಯೆಬಾರದಂತೆ ನಿರ್ವಹಣೆ ಮಾಡಲು ಸೂಚಿಸಿದರು.
ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಯುವ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.
ಕರ್ನಾಟಕ ಸುವರ್ಣ ಸಂಭ್ರಮದ ಈ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರೂ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಆಗಮಿಸುತ್ತಿದ್ದು, ಯಾವುದೇ ಸಮಸ್ಯೆಯಾಗದಂತೆ ವಸತಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ವಹಣೆ ಮತ್ತು ನಿರ್ಮಾಣ, ಸಾಂಸ್ಕೃತಿಕ ಕಾರ್ಯಕ್ರಮ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗಿದೆ. ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವುದರಿಂದ, ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆಗೆ ಸೂಚಿಸಿದರು.
ಕಾರ್ಯಕ್ರಮದ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತಾನಾಡಿ,ಭದ್ರತಾ ವ್ಯವಸ್ಥೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ದಾನಮ್ಮದೇವಿ ಟ್ರಸ್ಟಿನ ಅಧ್ಯಕ್ಷ ವಿಜುಗೌಡ ಪಾಟೀಲ, ಕಾರ್ಯದರ್ಶಿ ವಿಠ್ಠಲ್ ಪೂಜಾರ, ಆಹಾರ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ, ಪಿಆರ್ ಡಿ ಕಾರ್ಯನಿರ್ವಾಹಕ ಅಭಿಯಂತರರಾದ ನಬಿಲಾಲ ಗಬಸಾವಳಗಿ, ಗ್ರಾಮೀಣ ಕುಡಿಯವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಬಸವರಾಜ ಕುಂಬಾರ, ನಿರ್ಮಿತಿ ಕೇಂದ್ರದ ಮಲಜಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರ ಸಿ.ಬಿ.ಚಿಕ್ಕಲಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.