ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಪ್ತು ನಿಗಮ ನಿಯಮಿತದ (ಕೆಪೆಕ್) ಅಧ್ಯಕ್ಷರಾದ ಬಿ.ಎಚ್.ಹರೀಶ ಅವರು ಸೆ.೨೭ ಹಾಗೂ ಸೆ.೨೮ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಸೆ.೨೭ ರಂದು ಸಂಜೆ ೫:೩೦ಕ್ಕೆ ಬಾಗಲಕೋಟೆಯಿಂದ ಹೊರಟು, ವಿಜಯಪುರಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. ಸೆ.೨೮ರ ಬೆಳಿಗ್ಗೆ ೯ ಗಂಟೆಯಿಂದ ೧೦ ಗಂಟೆಯವರೆಗೆ ಶೀತಲಗೃಹ ಘಟಕಗಳಿಗೆ ಭೇಟಿ ನೀಡುವರು. ಬೆಳಿಗ್ಗೆ ೧೦ ರಿಂದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ತೋಟಗಾರಿಕಾ ಉಪ ನಿರ್ದೇಶಕರು, ಕೃಷಿ ಮಾರುಕಟ್ಟೆ ಉಪ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರು ಹಾಗೂ ಜಂಟಿ ನಿರ್ದೇಶಕರು ಕೃಷಿ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬೆಳಿಗ್ಗೆ ೧೧ ಗಂಟೆಗೆ ವಿಜಯಪುರದಿಂದ ಕುಷ್ಟಗಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
