ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ೦೬ ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಕಚೇರಿ ಸಹಾಯಕರ ಎರಡು ಹುದ್ದೆ ಹಾಗೂ ಕಚೇರಿ ಪ್ಯೂನ್ ಎರಡು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು, ಅಕ್ಟೋಬರ್ ೦೩ರೊಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎಡಿಆರ್ ಕಟ್ಟಡ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ ವಿಜಯಪುರ ಇವರಿಗೆ ಸಲ್ಲಿಸುವಂತೆಯೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
