ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ತಾಳ್ಮೆ ಹಾಗೂ ಆತ್ಮವಿಶ್ವಾಸ ವೃದ್ಧಿಯಾಗಿ ಸುಂದರ ವ್ಯಕ್ತಿತ್ವದ ಬದುಕು ನಮ್ಮದಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ ಭಜಂತ್ರಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಕ್ರೀಡಾ ಪ್ರಾಧಿಕಾರ ಇವರ ಸಹಯೋಗದಲ್ಲಿ ನಗರದ ಡಾ.ಬಿ.ಆರ್ ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಜನೆಯೊಂದಿಗೆ ಆಟೋಟಗಳಲ್ಲಿ ಭಾಗವಹಿಸುವುದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಚೈತನ್ಯಶಾಲಿಗಳಾಗಿ ಸದಾ ಚಟುವಟಿಕೆಯಿಂದಿರಲು ಸಹಾಯಕವಾಗುತ್ತದೆ ಎಂದು ಹೇಳಿದರು. ಆರೋಗ್ಯ ಸಂಪತ್ತು ನಮ್ಮೆಲ್ಲರ ಸಂಪತ್ತು. ಆರೋಗ್ಯವೇ ಭಾಗ್ಯ ಎಂಬ ನಾಣ್ಣುಡಿಯಂತೆ ಕ್ರೀಡೆಗಳಲ್ಲಿ ಭಾಗವಹಿಸಿ ದೈಹಿಕ ಹಾಗೂ ಮಾನಸಿಕ ಸಧೃಡತೆ ಹೊಂದಿ ದೈಹಿಕ ಆರೋಗ್ಯವಾಗಿರಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ದೈವಾಡಿ, ನ್ಯಾಯವಾದಿ ನಾಗರಾಜ ಲಂಬು, ಅಡಿವೆಪ್ಪ ಸಾಲಗಲ್ ತರಬೇತುದಾರರಾದ ರಾಜು ಚವ್ಹಾಣ, ರಫಿಕ್ ನಧಾಪ್, ಸಲ್ಲಾವುದ್ದೀನ್ ಮಳಗಿ, ಶಿವು ಅಮರಪ್ಪಗೊಳ, ಬಸವರಾಜ ಬೆಳ್ಳುಬ್ಬಿ, ಶಂಕರ ಸನಾಫ, ವಾಯ್.ಬಿ. ಜಂಪಲೆ, ಚಂದ್ರಶೇಖರ ವಾಲೀಕಾರ, ಶಾಲಾ ಶಿಕ್ಷಣ ಇಲಾಖೆಯ ಎಂ.ಆರ್. ಮಕಾನದಾರ, ಸಂತೋಷ ಶೇಠೆ, ಆರ್.ಕೆ. ದೇಶಪಾಂಡೆ, ಎ.ಎಚ್. ಸಗರ, ಅಲಿ ದಡೇದ, ಶ್ರೀದತ್ತ ಜೋಷಿ, ಸಂಗನಗೌಡ ಕಡಕಲ್ ಹಾಗೂ ಮಮದಾಪುರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

