Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು!
(ರಾಜ್ಯ ) ಜಿಲ್ಲೆ

ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು!

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುಡಾ ಹಗರಣ | ಮೈಸೂರು ಲೋಕಾಯುಕ್ತದಲ್ಲಿ ದಾಖಲು | ಸಿಎಂ ಸಿದ್ದರಾಮಯ್ಯ A1, ಅವರ ಪತ್ನಿ ಪಾರ್ವತಿ A2 ಆರೋಪಿ

ಉದಯರಶ್ಮಿ ದಿನಪತ್ರಿಕೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಪಟ್ಟಂತೆ ನಿರೀಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಎಫ್ಐಆರ್ ದಾಖಲಾಗಿದೆ.
ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯನವರ ತವರು ಜಿಲ್ಲೆ ಮೈಸೂರು ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲಾಗಿದೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲಾಗಿದೆ.
ಸಿಆರ್‌ಪಿಸಿ ಅಡಿಯಲ್ಲಿ ಎಫ್​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಹಲವು ಸೆಕ್ಷನ್ ಗಳಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸುವಂತೆ ನ್ಯಾಯಾಲಯ ಸೂಚಿಸಿತ್ತು. ನ್ಯಾಯಾಲಯ ಸೂಚಿಸಿರುವ ಐಪಿಸಿ ಸೆಕ್ಷನ್ ಭ್ರಷ್ಟಾಚಾರ ತಡೆ ಕಾಯ್ದೆ, ಬೇನಾಮಿ ಆಸ್ತಿ ವಹಿವಾಟು ಕಾಯ್ದೆ, ಭೂ ಕಬಳಿಕೆ ನಿರ್ಬಂಧ ಕಾಯ್ದೆಯಡಿ ಲೋಕಾಯುಕ್ತ ಎಫ್​ಐಆರ್ ದಾಖಲಿಸಿದೆ.
ಎ1 ಆರೋಪಿ: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಅವರ ಬಾಮೈದಾ ಮಲ್ಲಿಕಾರ್ಜುನ A 3, ಭೂಮಾಲಿಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್​ಐಆರ್​ನಲ್ಲಿ ದಾಖಲಿಸಲಾಗಿದೆ.

ಸಿದ್ದಾಪರಾಧ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ :ಎಚ್ಡಿಕೆ

ಬೆಂಗಳೂರು: ಸಿಬಿಐ ರಾಜ್ಯ ಪ್ರವೇಶಕ್ಕೆ ಕರ್ನಾಟಕ ಸರ್ಕಾರದಿಂದ ನಿರ್ಬಂಧ ಮಾಡಿರುವ ವಿಚಾರಕ್ಕೆ ಸರ್ಕಾರದ ನಡೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.
ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ, ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಎಂದು ಪ್ರಶ್ನಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ

ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ

ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ

ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಟೌನ್ ಶಿಪ್ ಯೋಜನೆ ರದ್ದುಗೊಳ್ಳುವರೆಗೂ ವಿಧಾನಸೌಧದೊಳಗೆ ಧರಣಿ
    In (ರಾಜ್ಯ ) ಜಿಲ್ಲೆ
  • ಮಾದಕ ದ್ರವ್ಯ ಮುಕ್ತ ಸಮಾಜಕ್ಕೆ ಆರಕ್ಷಕರ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ಗಾನಕೋಗಿಲೆ ಎಸ್.ಜಾನಕಿಗೆ ಭಾವಪೂರ್ಣ ನುಡಿ ನಮನ
    In (ರಾಜ್ಯ ) ಜಿಲ್ಲೆ
  • 4 ತಿಂಗಳಿಂದ ಮುಗಿಯದ ದೇವಣಗಾಂವ ಸೇತುವೆ ದುರಸ್ತಿ
    In (ರಾಜ್ಯ ) ಜಿಲ್ಲೆ
  • ಅಕ್ರಮ ಮರಳು ಸಾಗಾಟದ ಟ್ರ‍್ಯಾಕ್ಟರ್ ವಶ :ಚಾಲಕ ಪರಾರಿ
    In (ರಾಜ್ಯ ) ಜಿಲ್ಲೆ
  • ಸಾವಿನ ಮನೆಗೆ ಸಾಂತ್ವನ ಕಾರ್ಯಕ್ರಮ ಮೂಲಕ ನೊಂದವರಿಗೆ ನೆರವು
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ನಡೆದ ರೈತರ ಹೋರಾಟ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಎಲ್ಲ ಕಾಲುವೆಗಳಿಗೆ ತಕ್ಷಣ ನೀರು ಹರಿಸಲು ಕರವೇ ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂಗತತ್ವ ನಿಷ್ಠ ಹಡಪದ ಅಪ್ಪಣ್ಣ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.