ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಗೆ ಅಂತಿಮ ಮುದ್ರೆ ಒತ್ತಿದ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ನಡೆ ಸ್ವಾಗತಾರ್ಹ ಎಂದು ಹಿರಿಯ ಪತ್ರಕರ್ತ ಸಂಜೀವರಾವ್ ಕುಲ್ಕರ್ಣಿ ಹರ್ಷ ವ್ಯಕ್ತಪಡಿಸಿದರು.
ಈ ಕುರಿತು ಶುಕ್ರವಾರ ಪ್ರತಿಕ್ರಿಯಿಸಿದ ಅವರು, ದಶಕಗಳ ಬೇಡಿಕೆ ಈಡೇರಿಕೆಗೆ ಸಂತಸ ವ್ಯಕ್ತಪಡಿಸುತ್ತಾ, ಈ ಆದೇಶದಿಂದ ರಾಜ್ಯದ ಅರ್ಹ ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಬಹಳಷ್ಟು ಸಹಕಾರಿಯಾಗಲಿದೆ ಎಂದವರು, ಪ್ರಣಾಳಿಕೆಯಲ್ಲಿ ತಿಳಿಸಿದಂತೆ ನುಡಿದಂತೆ ನಡೆದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಧನ್ಯವಾದ ಅರ್ಪಿಸಿದ ಅವರು ಯೋಜನೆ ಜಾರಿಗೊಳಿಸಲು ಕಾರಣೀಭೂತರಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮಾದ್ಯಮ ಸಲಹೆಗಾರ ಕೆ ವಿ ಪ್ರಭಾಕರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರಿಗೆ ಅಭಿನಂದನೆ ಸಲ್ಲಿಸಿದರು.

